ಶಿವಮೊಗ್ಗ ರೈಲ್ವೆ ಸ್ಟೇಷನ್‌ ರೋಡಲ್ಲಿ ಅಪಘಾತ, ಕಾರು ಡಿಕ್ಕಿಯಾಗಿ ಮಹಿಳೆಗೆ ಗಂಭೀರ ಗಾಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಉಷಾ ನರ್ಸಿಂಗ್‌ ಹೋಂ ಸರ್ಕಲ್‌ ಕಡೆಯಿಂದ ತೆರಳುತ್ತಿದ್ದ ಕಾರು ರೋಟರಿ ರಕ್ತನಿಧಿ ಸಮೀಪ ಮಹಿಳೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಿಳೆಯ ಎಡಗಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮಹಿಳೆಗೆ ಡಿಕ್ಕಿ ಹೊಡೆದು ನಂತರ ಫುಟ್‌ಪಾತ್‌ನ ರೇಲಿಂಗೆ ಅಪ್ಪಳಿಸಿದೆ. ಇದರಿಂದ ರೇಲಿಂಗ್‌ ಕೂಡ ಹಾನಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿ ಕಾಲೇಜು ವಿದ್ಯಾರ್ಥಿಗಳಷ್ಟೆ ಇದ್ದರು ಎಂದು ತಿಳಿದು ಬಂದಿದೆ.

Car-accident-in-Shimoga-Railway-Station-Road.

ಇನ್ನು, ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ವಿಧಾನ ಪರಿಷತ್‌ ಸದಸ್ಯ ಡಿ.ಎಸ್. ಅರುಣ್ ಅವರು ತಕ್ಷಣವೇ ತಮ್ಮ ಕಾರನ್ನು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಧಾವಿಸಿದ್ದಾರೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!