ಶಿವಮೊಗ್ಗದ ಆಲ್ಕೊಳ ಬಳಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ, ತಪ್ಪಿದ ಅನಾಹುತ

SHIVAMOGGA LIVE NEWS | 8 JULY 2024 (ಈ ಸುದ್ದಿಯನ್ನು ಇನ್ನು 37 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ನಗರದ ಆಳ್ಕೊಳ ವೃತ್ತ ಸಮೀಪದ ಭಾರತೀಯ ಆಹಾರ ನಿಗಮದ ಕಚೇರಿ ಎದುರು ರಸ್ತೆ ಬದಿ ವಿದ್ಯುತ್ ಕಂಬಕ್ಕೆ (POLE) ಕಾರು ಡಿಕ್ಕಿ ಹೊಡೆದು ಚಾಲಕ ಗಾಯಗೊಂಡಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಶನಿವಾರ ರಾತ್ರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಅಪಘಾತದ ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ. ವಿದ್ಯುತ್ ಕಂಬ ರಸ್ತೆಗೆ ವಾಲಿಕೊಂಡಿರುವುದರಿಂದ ಈ ರಸ್ತೆಯಲ್ಲಿ ಭಾನುವಾರ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಮತ್ತೊಂದು ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ

ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಭದ್ರಾ ಜಲಾಶಯ ಒಳ ಹರಿವು ಮತ್ತಷ್ಟು ಕುಸಿತ, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

ACCIDENT-NEWS-GENERAL-IMAGE.

Leave a Comment