ಶಿವಮೊಗ್ಗ: ರಸ್ತೆ ದಾಟುವಾಗ ಕಾರು (Car) ಡಿಕ್ಕಿ ಹೊಡೆದು ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ನಿದಿಗೆ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿಯ ಜಿಂಕ್‌ಲೈನ್ ರಸ್ತೆ ನಿವಾಸಿ ನಂಜುಂಡ.ಬಿ (57) ಮೃತರು. ಇಲ್ಲಿನ ಜೈನ್ ಪಬ್ಲಿಕ್ ಶಾಲೆಯಲ್ಲಿ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಸಂಜೆ ಕರ್ತವ್ಯಕ್ಕೆ ಹಾಜರಾಗಿ ಸ್ವಲ್ಪ ಸಮಯದ ಬಳಿಕ ಟೀ ಕುಡಿಯಲು ನಂಜುಂಡ ತೆರಳಿದ್ದರು.
ನಿದಿಗೆ ಬಸ್ ನಿಲ್ದಾಣದ ಕಡೆಗೆ ತೆರಳಲು ರಸ್ತೆ ದಾಟುವಾಗ ಮಲವಗೊಪ್ಪ ಕಡೆಯಿಂದ ಬಂದು ಕಾರು ಡಿಕ್ಕಿ ಹೊಡೆದು ನಂಜುಂಡ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ಹೊತ್ತಿಗಲೆ ಅವರು ಮೃತಪಟ್ಟಿದ್ದರು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮತ್ತೆ ಮೈ ಸುಡಲಿದೆ ಬಿಸಿಲು, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
Car Incident
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





