ಶಿವಮೊಗ್ಗ ಲೈವ್
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾಲಿನ ವಾಹನದ ಚಾಲಕನಿಗೆ ಗಂಭೀರ ಗಾಯವಾಗಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗದ ಸಾಗರ ರಸ್ತೆಯ ಹರ್ಷ ಫರ್ನ್ ಹೋಟೆಲ್ ತಿರುವಿನ ಬಳಿ ಘಟನೆ ಸಂಭವಿಸಿದೆ. ಹಾಲಿನ ವ್ಯಾನ್ ಸಾಗರದ ಕಡೆಗೆ ತೆರಳುತ್ತಿತ್ತು. ಸಾಗರ ಕಡೆಯಿಂದ ಬರುತ್ತಿದ್ದ ರೆನಾಲ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಹಾಲಿನ ವಾಹನಕ್ಕೆ ಡಿಕ್ಕಿಯಾಗಿದೆ ಎಂದು ಆರೋಪಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ. ಅಪಘಾತದಲ್ಲಿ ಹಾಲಿನ ವ್ಯಾನ್ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿದ್ದವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: