ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಕಾರನ್ನು (CAR) ಯದ್ವತದ್ವ ಚಲಾಯಿಸಿ ಸರಣಿ ಅಪಘಾತ ಮಾಡಿದ್ದಾನೆ. ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರಿನ ಮುಂಭಾಗ ಜಖಂ ಆಗಿದೆ. (ಈ ಸುದ್ದಿಯನ್ನು ಇನ್ನು 49 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಘಟನೆ ಸಂಬಂಧ ಹೊನ್ನಾಳಿಯ ಕುಮಾರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ಪರೀಕ್ಷೆಗೆ ಒಳಪಡಿಸಿದ್ದಾರೆ.
ರಸ್ತೆ ಉದ್ದಕ್ಕೂ ವಾಹನಗಳಿಗೆ ಡಿಕ್ಕಿ
ಗೋಪಿ ವೃತ್ತದ ಅಂಬಿಕಾ ಬುಕ್ ಸ್ಟೋರ್ ಸಮೀಪ ಮೊದಲು ವಾಹನವೊಂದಕ್ಕೆ ಡಿಕ್ಕಿ ಹೊಡೆದ ಕಾರು ಬಾಲರಾಜ ಅರಸ್ ರಸ್ತೆಯಲ್ಲಿ ಒಟ್ಟು ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮಹಾವೀರ ವೃತ್ತದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಕಾರಿನ ಬಲ ಬದಿಯ ಚಕ್ರ ಮುರಿದಿಕೊಂಡಿದ್ದರಿಂದ ನಿಂತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ದ್ವಿಚಕ್ರ ವಾಹನ, ಆಟೋ, ಕಾರು ಮತ್ತು ಬಸ್ ಒಂದಕ್ಕೆ ಕಾರು ಡಿಕ್ಕಿಯಾಗಿದೆ. ಹಲವರು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡಿದ್ದಾರೆ. ಸ್ವಲ್ಪ ಯಾಮಾರಿದ್ದರು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ತಿಳಿದು ಬಂದಿದೆ. ಪೂರ್ವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?
CAR mishap from gopi circle in shimoga

