ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿದವನು ಒಬ್ಬನಲ್ಲ, ಘಟನೆಗೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

MAY-REPORT-1-LAKH-VIEWERS

SHIVAMOGGA LIVE NEWS | SHIMOGA | 9 ಜೂನ್ 2022

ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರಿಗೆ ಚಾಕು ಇರಿತ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಹಳೆ ವೈಷಮ್ಯವೆ ಘಟನೆಗೆ ಕಾರಣ ಎಂದು ಮೆಲ್ನೋಟಕ್ಕೆ ತಿಳಿದು ಬಂದಿದೆ. (ASSAULT)

Shimoga Nanjappa Hospital

ಚೋರ್ ಬಜಾರ್’ನಲ್ಲಿ ಬಟ್ಟೆ ವ್ಯಾಪಾರಿ ಸೆಂದಿಲ್ ಕುಮಾರ್ (43) ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿತ್ತು. ಎದೆ ಭಾಗ, ಕಿಬ್ಬೊಟ್ಟೆ, ಎಡ ತೊಡೆಗೆ ಮಾರಕಾಸ್ತ್ರಗಳಿಂದ ಇರಿಯಲಾಗಿತ್ತು. ಕೂಡಲೆ ಸೆಂದಿಲ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.

ಸೆಂದಿಲ್ ಮಂಗಳೂರಿಗೆ ಶಿಫ್ಟ್

ಗಾಯಾಳು ಸೆಂದಿಲ್ ಕುಮಾರ್ ಆರೋಗ್ಯ ಸ್ಥಿರವಾಗಿದೆ. ‘ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ತಿಳಿಸಿದ್ದಾರೆ.

ನಾಲ್ವರ ವಿರುದ್ಧ ಪ್ರಕರಣ ದಾಖಲು

ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಜೋಗಿ ಸಂತು, ರಮೇಶ, ಲೋಕೇಶ ಮತ್ತು ಅಪರಿಚಿತನೊಬ್ಬನ ಮೇಲೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ತಿಳಿಸಿದರು.

ಹಲ್ಲೆಗೆ ಕಾರಣವೇನು?

ಸೆಂದಿಲ್ ಕುಮಾರ್ ಮತ್ತು ಜೋಗಿ ಸಂತು ಈ ಮೊದಲು ಅಕ್ಕಪಕ್ಕದಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದರು. ಸ್ವಲ್ಪ ಸಮಯದ ಬಳಿಕ ಜೋಗಿ ಸಂತು ಅಂಗಡಿ ಖಾಲಿ ಮಾಡಿಕೊಂಡು ಹೋಗಿದ್ದ. ಆದರೆ ಆಗಾಗ ಸೆಂದಿಲ್ ಕುಮಾರ್ ಬಳಿ ಬಂದು ಸಾಲಕ್ಕಾಗಿ ಹಣ ನೀಡುವಂತೆ ಪೀಡಿಸುತ್ತಿದ್ದ. ಹಣ ಕೊಡದಿದ್ದರೆ ಗಲಾಟೆ ಮಾಡುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ –  ಶಿವಮೊಗ್ಗದ ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ

ಸೆಂದಿಲ್ ಕುಮಾರನ ಅಂಗಡಿಯ ಪಕ್ಕದಲ್ಲಿ ಲೋಕೇಶ್ ಎಂಬಾತ ಅಂಗಡಿ ಹಾಕಿಕೊಂಡಿದ್ದ. ಆತನೂ ಆಗಾಗ ಜಗಳ ಮಾಡುತ್ತಿದ್ದ. ಜೂನ್ 7ರಂದು ರಾತ್ರಿ ಜೋಗಿ ಸಂತೂ, ರಮೇಶ, ಲೋಕೇಶ ಮತ್ತು ಅಪರಿಚಿತನೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Gangothri College Shimoga

ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಚಾಕು ಇರಿತದ ಬೆನ್ನಿಗೆ ಹಬ್ಬಿದ ವದಂತಿ, ಶಿವಮೊಗ್ಗ ನಗರದಲ್ಲಿ ಆತಂಕ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment