ಶಿವಮೊಗ್ಗ ಲೈವ್.ಕಾಂ | SHIMOGA NEWS | 09 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ದುರ್ಗಿಗುಡಿಯಲ್ಲಿ ನಡುರಾತ್ರಿ ಪಟಾಕಿ ಸಿಡಿಸಿದ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಬರುತ್ತಿದ್ದಂತೆ ಪರಾರಿಯಾಗುವಾಗ ಯುವಕರು ತಮ್ಮ ಬೈಕುಗಳನ್ನು ಬಿಟ್ಟು ಹೋಗಿದ್ದಾರೆ.
ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ಜುವೆಲ್ ರಾಕ್ ಹೊಟೇಲ್ ಸಮೀಪ ದುರ್ಗಿಗುಡಿಯಲ್ಲಿ ಪಟಾಕಿ ಸಿಡಿಸಲಾಗಿದೆ. ಗಸ್ತು ತಿರುಗುತ್ತಿದ್ದ ದೊಡ್ಡಪೇಟೆ ಠಾಣೆ ಪೊಲೀಸರು ಪಟಾಕಿ ಸ್ಪೋಟಗೊಂಡ ಸ್ಥಳಕ್ಕೆ ಬಂದಿದ್ದಾರೆ.
ಖಾಕಿ ಕಂಡು ಯುವಕರು ಎಸ್ಕೇಪ್
ಜನವಸತಿ ಪ್ರದೇಶದಲ್ಲಿ ನಡುರಾತ್ರಿ ಪಟಾಕಿ ಸಿಡಿಸುತ್ತಿದ್ದ ಯುವಕರು, ಪೊಲೀಸರು ಬರುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಸ್ಥಳದಲ್ಲಿ ಪಟಾಕಿ ಸಿಡಿಸಿದ ಗುರುತು ಇದ್ದದ್ದು ಪೊಲೀಸರು ಗಮನಕ್ಕೆ ಬಂದಿದೆ. ಇನ್ನು, ಯುವಕರು ತಮ್ಮ ಬೈಕುಗಳನ್ನು ಸ್ಥಳದಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಪೊಲೀಸರು ಒಂದು ಸ್ಕೂಟಿ, ಒಂದು ಹೋಂಡಾ ಆಕ್ಟೀವಾ ವಶಕ್ಕೆ ಪಡೆದಿದ್ದಾರೆ.
ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






