ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಈದ್ ಮಿಲಾದ್ ಅಂಗವಾಗಿ ಭದ್ರಾವತಿಯಲ್ಲಿ ಆಯೋಜಿಸಿದ್ದ ಮೆರವಣಿಗೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಪ್ರಕರಣ 1 : ಕೋವಿಡ್ ನಿಯಮ ಉಲ್ಲಂಘನೆ
ಅನುಮತಿ ಪಡೆಯದೆ ಏಕಾಏಕಿ ಈದ್ ಮಿಲಾದ್ ಮೆರವಣಿಗೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಲ್’ನಿಂದ, ಸಿ.ಎನ್.ರಸ್ತೆ, ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್, ತರೀಕೆರೆ ರಸ್ತೆ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಸಲಾಯಿತು. ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಮುರ್ತುಜಾ ಖಾನ್, ಅಮೀರ್ ಜಾನ್, ಬಾಬ್ ಜಾನ್, ಸಾಬ್ ಜಾನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣ 2 : ಕರ್ತವ್ಯಕ್ಕೆ ಅಡ್ಡಿ, ಬಸ್ ಹತ್ತಿ ತೊಂದರೆ
ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲವು ಯುಕವರು ರಸ್ತೆಯಲ್ಲಿ ಬರುತ್ತಿದ್ದ KSRTC ಬಸ್ಸುಗಳ ಮೇಲೆ ಹತ್ತಿ ಧ್ವಜ ತಿರುಗಿಸಿ, ಘೋಷಣೆಗಳನ್ನು ಕೂಗಿದ್ದಾರೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಬಸ್ಸುಗಳ ಟಾಪ್ ಮೇಲೆ ಹತ್ತಿ, ಅವಾಚ್ಯವಾಗಿ ನಿಂದಿಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಲಾಗಿದೆ. ಬಸ್ಸುಗಳನ್ನು ಹತ್ತದಂತೆ ತಡೆದ ಪೊಲೀಸರನ್ನು ತಳ್ಳಾಡಲಾಗಿದೆ. ಈ ಸಂಬಂಧ ಮುಸ್ತಾಕಿಮ್, ಚೋಟು, ಜಬೀವುಲ್ಲಾ ಸೇರಿದಂತೆ ಸುಮಾರು 20 ವಿರುದ್ಧ ಪ್ರಕರಣ ದಾಖಲಾಗಿದೆ.
ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






