ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯ ಮೂವರು ಸಿಬ್ಬಂದಿ ವಿರುದ್ಧ ಅದೆ ಮಳಿಗೆಯ ಬ್ರಾಂಚ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಹಣ ದುರುಪಯೋಗವಾದ ಬಗ್ಗೆ ಆರೋಪ ಹೊರಿಸಿದ್ದಾರೆ.
ದುರ್ಗಿಗುಡಿ ಬಳಿ ಇರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ಇಬ್ಬರು ಕ್ಯಾಷಿಯರ್’ಗಳು ಮತ್ತು ಒಬ್ಬ ಅಕೌಂಟೆಂಟ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ?

ಚಿನ್ನಾಭರಣ ಮಳಿಗೆಯಲ್ಲಿ ಇಂಟರ್’ನಲ್ ಆಡಿಟಿಂಗ್ ಮಾಡಲಾಗಿದೆ. ಈ ವೇಳೆ 28 ಲಕ್ಷ ರೂ. ಹಣವನ್ನು ಸಂಸ್ಥೆಗೆ ಪಾವತಿ ಮಾಡದೆ ಇರುವುದು ಬೆಳಕಿಗೆ ಬಂದಿದೆ. ಇಬ್ಬರು ಕ್ಯಾಷಿಯರ್ ಮತ್ತು ಅಕೌಂಟೆಂಟ್ ಈ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಮೂವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಅಚ್ಚುಕಟ್ಟಾದ ಮನೆಗೆ ಅಚ್ಚುಕಟ್ಟಾದ ಪೀಠೋಪಕರಣ. ಶಿವಮೊಗ್ಗದಲ್ಲಿ @HOME ಶೋರೂಂ. ಒಮ್ಮೆ ಭೇಟಿ ಕೊಡಿ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






