SHIVAMOGGA LIVE NEWS | CRIME | 31 ಮೇ 2022
ನ್ಯಾಯಾಲಯದ ಆದೇಶದ ಮೇರೆಗೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, ಠಾಣೆ ಸಿಬ್ಬಂದಿ, ಪಿಡಿಒ, ವೈದ್ಯರು ಸೇರಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೊರಬ ತಾಲೂಕು ದೇವತಿಕೊಪ್ಪದ ವಕೀಲ ಪ್ರಕಾಶ್ ನಾಯ್ಕ್ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 10 ಮಂದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಶಿಕಾರಿಪುರ ಉಪ ಅಧೀಕ್ಷಕರಿಗೆ ಸೂಚನೆ ನೀಡಿತ್ತು.
ಏನಿದು ಪ್ರಕರಣ?
2020ರ ಮಾರ್ಚ್ 26ರಂದು ಹತ್ತು ಆರೋಪಿಗಳು ಏಕಾಏಕಿ ತಮ್ಮ ಮನೆಯೊಳಗೆ ನುಗ್ಗಿ, ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕರೋನ ಆಸ್ಪತ್ರೆಗೆ ಕರೆದೊಯ್ದು ಅಕ್ರಮವಾಗಿ ಬಂಧನದಲ್ಲಿ ಇರಿಸಿದ್ದರು. ಈ ವೇಳೆ ಹಣೆಗೆ ಪಿಸ್ತೂಲ್ ಇಟ್ಟು ಕೊಲೆ ಮಾಡಲು ಯತ್ನಿಸಿದ್ದರು ಎಂದು ಆರೋಪಿಸಿ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಸೊರಬ ಪಿಎಸ್ಐ, ಇನ್ಸ್ ಪೆಕ್ಟರ್, ಇಬ್ಬರು ಸಿಬ್ಬಂದಿ, ಪಿಡಿಒ, ಸಾಮಾಜಿಕ ಕಾರ್ಯಕರ್ತೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಇಬ್ಬರು ವೈದ್ಯರು ಸೇರಿ ಹತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮಹಾನಗರ ಪಾಲಿಕೆ ಸಿಬ್ಬಂದಿ ಮೇಲೆ ಎಸಿಬಿ ರೇಡ್, ಲಂಚದ ಹಣದ ಜೊತೆಗೆ ವಶಕ್ಕೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.