ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 ಮಾರ್ಚ್ 2022
ಪರಿಶಿಷ್ಟ ಜಾತಿಗೆ ಸೇರದಿದ್ದರೂ ಸುಳ್ಳು ಮಾಹಿತಿ ಒದಗಿಸಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪ ಸಂಬಂಧ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣದ ದಾಖಲಾಗಿದೆ. ಆತನಿಗೆ ಸಹಕರಿಸಿದ ಆರೋಪದ ಹಿನ್ನೆಲೆ ಅಂದಿನ ಗ್ರಾಮ ಲೆಕ್ಕಿಗ, ರೆವಿನ್ಯೂ ಇನ್ಸ್ ಪೆಕ್ಟರ್ ಮತ್ತು ಸೊರಬ ತಹಶೀಲ್ದಾರ್ ವಿರುದ್ಧವು ಕೇಸ್ ದಾಖಲಾಗಿದೆ.
ಸೊರಬದ ಷಣ್ಮುಖ ಎಂಬುವವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಆ ವರ್ಗಕ್ಕೆ ಸೇರದಿದ್ದರೂ ಸುಳ್ಳು ಪ್ರಮಾಣ ಪತ್ರ ಹೊಂದಿದ್ದ ಸಂಬಂಧ ದೂರ ದಾಖಲಾಗಿತ್ತು. ತನಿಖೆ ನಡೆಸಿದ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ, ಷಣ್ಮುಖ ಅವರ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸುವಂತೆ ಆದೇಶಿಸಿತ್ತು.
ಸುಳ್ಳು ಮಾಹಿತಿ ಒದಗಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಹೊಂದಿದ ಆರೋಪದ ಹಿನ್ನೆಲೆ ಷಣ್ಮುಖ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ಇನ್ನು, ಷಣ್ಮುಖಗೆ ನೆರವಾದ ಆರೋಪ ಸಂಬಂಧ ಅಂದಿನ ಗ್ರಾಮ ಲೆಕ್ಕಿಗ, ರೆವಿನ್ಯೂ ಇನ್ಸ್ ಪೆಕ್ಟರ್ ಮತ್ತು ಆವತ್ತಿನ ತಹಶೀಲ್ದಾರ್ ವಿರುದ್ಧವು ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ | ತಹಶೀಲ್ದಾರ್, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿ ನಾಲ್ವರ ವಿರುದ್ಧ ಶಿವಮೊಗ್ಗದಲ್ಲಿ ಕೇಸ್
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422