ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮೂವರ ವಿರುದ್ಧ ಶಿವಮೊಗ್ಗದಲ್ಲಿ ಕೇಸ್ ದಾಖಲಾಗಿದೆ. ಹೋಂ ಕ್ವಾರಂಟೈನ್ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಕೇಸ್ ಆಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎಲ್ಲೆಲ್ಲಿ ಕೇಸ್ ಆಗಿದೆ?
ಶಿವಮೊಗ್ಗ | ತುಂಗಾ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಬ್ಬರು ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಾಗರ | ತಾಲೂಕಿನ ಗ್ರಾಮವೊಂದರ ವ್ಯಕ್ತಿಯೊಬ್ಬರು ಕ್ವಾರಂಟೈನ್ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ವಾರಂಟೈನ್ ನಿಯಮ ಉಲ್ಲಂಘಿಸದಂತೆ ನಿಗಾ
ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವವರು ಮತ್ತು ಕೋವಿಡ್-19 ಪಾಸಿಟಿವ್ ದೃಡಪಟ್ಟ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಅಥವಾ ಹೋಂ ಕ್ವಾರಂಟೈನ್‍ನಲ್ಲಿ ಇರಿಸಲು ಅವಕಾಶವಿದೆ. ಈ ಕ್ವಾರಂಟೈನ್ ಆದೇಶವನ್ನು ಉಲ್ಲಂಘನೆ ಮಾಡದಂತೆ ಖಾತ್ರಿ ಪಡಿಸಿಕೊಳ್ಳಲು CQAS (COVID-19 Quarantine Alert System) ಮೂಲಕ ನಿರಂತರವಾಗಿ ನಿಗಾವಹಿಸಲಾಗುತ್ತದೆ. ಒಂದು ವೇಳ ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]