ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 5 FEBRUARY 2023
RIPPONPETE | ಸರ್ಕಾರಿ ಶಾಲೆಯೊಂದರ 5ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಸಂಬಂಧ ಶಿಕ್ಷಕ (Teacher) ಮತ್ತು ಶಿಕ್ಷಕಿ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ.
ಶಿಕ್ಷಕನಿಂದ ಲೈಂಗಿಕ ಕಿರುಕುಳ
5ನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಶಾಲೆಯ ಶಿಕ್ಷಕನೊಬ್ಬ (Teacher) ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ವಿದ್ಯಾರ್ಥಿನಿ ತನ್ನ ತಾಯಿಗೆ ವಿಚಾರ ತಿಳಿಸಿದ್ದಾಳೆ. ವಿದ್ಯಾರ್ಥಿನಿಯ ತಾಯಿ ಶಾಲೆಗೆ ತೆರಳಿ ಶಿಕ್ಷಕಿಯೊಬ್ಬರಿಗೆ ಲೈಂಗಿಕ ಕಿರುಕುಳದ ಕುರಿತು ದೂರಿದ್ದಾರೆ. ಆ ಶಿಕ್ಷಕನಿಗೆ ತಿಳಿ ಹೇಳುವಂತೆ ಮನವಿ ಮಾಡಿದ್ದಾರೆ.
‘ಟಿಸಿ ಕೊಡಬೇಕಾಗುತ್ತದೆ’
ವಿದ್ಯಾರ್ಥಿನಿಯ ತಾಯಿಯ ಆರೋಪ ನಿರಾಕರಿಸಿದ ಶಿಕ್ಷಕಿ, ಸುಳ್ಳು ಆರೋಪ ಮಾಡಿದರೆ ಟಿಸಿ ಕೊಡಬೇಕಾಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾರೆ. ಆಗ ವಿದ್ಯಾರ್ಥಿನಿಯ ತಾಯಿ, ತನ್ನ ಪತಿಗೆ ವಿಚಾರ ತಿಳಿಸಿದ್ದಾರೆ. ಅಷ್ಟು ಹೊತ್ತಿಗೆ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಮನೆಗೆ ಬಂದಿದ್ದಾರೆ. ವಿದ್ಯಾರ್ಥಿನಿಯಿಂದ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ – ಬೈಕಿನಿಂದ ಬಿದ್ದು ಹಿಂಬದಿ ಸವಾರ ಸಾವು | ಬಾರ್ ಕ್ಯಾಶಿಯರ್ ತಲೆಗೆ ಬಾಟಲಿ ಹೊಡೆದ ಕುಡುಕರು | ಜಿಲ್ಲೆಯ 5 CRIME NEWS
ಘಟನೆ ಸಂಬಂಧ ಶಾಲೆಯ ಶಿಕ್ಷಕ ಮತ್ತು ಶಿಕ್ಷಕಿ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422