
ಶಿವಮೊಗ್ಗ ಲೈವ್.ಕಾಂ | SHIMOGA | 7 ಏಪ್ರಿಲ್ 2020
ಲಾಕ್’ಡೌನ್ ಸಂದರ್ಭ ವಾಟ್ಸಪ್, ಫೇಸ್’ಬುಕ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ನೀಡುವ ಮೆಸೇಜುಗಳನ್ನು ಫಾರ್ವರ್ಡ್ ಮಾಡುತ್ತಿದ್ದ ಇಬ್ಬರ ವಿರುದ್ಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನ್ಯಧರ್ಮೀಯರ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಕೋಮು ಪ್ರಚೋದನಕಾರಿ ವಿಡಿಯೋಗಳನ್ನು ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಷೇರ್ ಮಾಡುವಂತಿಲ್ಲ. ಹೀಗೆ ಮಾಡಿ ಸಾಮಾಜಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರೂಪ್ ಅಡ್ಮಿನ್’ಗಳೇ ಎಚ್ಚರ
ಇಂತಹ ಮೆಸೇಜುಗಳು ವಾಟ್ಸಪ್ ಗ್ರೂಪ್’ಗಳಲ್ಲಿ ಫಾರ್ವರ್ಡ್ ಮಾಡಿದರೆ ಗ್ರೂಪ್ ಅಡ್ಮಿನ್’ಗಳೇ ಹೊಣೆಗಾರರಾಗುತ್ತಾರೆ. ಅವರ ವಿರುದ್ಧವು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]