ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | AYANUR NEWS | 8 ನವೆಂಬರ್ 2021
ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್’ಗೆ ಒಳಪಡಿಸಿದ್ದಾರೆ. ಆತ ಗಾಂಜಾ ಸೇವನೆ ಮಾಡಿರುವುದು ತಿಳಿಯುತ್ತಿದ್ದಂತೆ ಪ್ರಕರಣ ದಾಖಲು ಮಾಡಲಾಗಿದೆ.
ಆಯನೂರು ಬಸ್ ನಿಲ್ದಾಣದ ಬಳಿ ರುದ್ರೇಶ್ ನಾಯ್ಕ ಎಂಬಾತ ಅನಮಾನಾಸ್ಪದವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಪೊಲೀಸರು ಆತನನ್ನು ವಿಚಾರಣೆ ನಡೆಸಿದ್ದಾರೆ. ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ರುದ್ರೇಶ್ ನಾಯ್ಕನನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಿದಾಗ, ಗಾಂಜಾ ಸೇವನೆ ಖಚಿತಗೊಂಡಿದೆ. ಆತನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಲಾಗಿದೆ. ಕುಂಸಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಆಗಿಂದಾಗ್ಗೆ ಆರೋಗ್ಯ ತಪಾಸಣೆಯಿಂದ ಸಂಭವಿಸಬಹುದಾದ ಅಪಾಯ ತಪ್ಪಲಿದೆ. ಇಲ್ಲಿದೆ ತಜ್ಞ ವೈದ್ಯರಿಂದ ಸೂಕ್ತ ತಪಾಸಣೆ, ಸೂಕ್ತ ಸಲಹೆ)
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422