SHIVAMOGGA LIVE | 2 JUNE 2023
SHIMOGA : ಮಂಗಳೂರು ವಿಮಾನ ನಿಲ್ದಾಣಕ್ಕೆ (Airport) ಬಾಂಬ್ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್ ವಿರುದ್ಧ ಶಿವಮೊಗ್ಗದ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಉಂಟು ಮಾಡಿದ ಆರೋಪದ ಹಿನ್ನೆಲೆ ಶಿವಮೊಗ್ಗದ ಕೇಂದ್ರ ಕಾರಾಗೃಹದ ಚೀಫ್ ಸೂಪರಿಂಟೆಂಡೆಂಟ್ ಅವರು ದೂರು ನೀಡಿದ್ದಾರೆ.
ಏನಿದು ಪ್ರಕರಣ?
ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಆದಿತ್ಯ ರಾವ್ ಮೇ 31ರಂದು ಮಧ್ಯಾಹ್ನ ಜೈಲಿನ ವಿಡಿಯೋ ಕಾನ್ಫರೆನ್ಸ್ ಕೊಠಡಿ ಬಳಿ ಬಂದಿದ್ದ. ಇವತ್ತು ತನ್ನ ವಿಚಾರಣೆ ಇದೆಯೇ ಎಂದು ಪ್ರಶ್ನಿಸಿದ್ದ. ಅಲ್ಲಿದ್ದ ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸಿ ಇಲ್ಲ ಎಂದು ತಿಳಿಸಿದ್ದರು. ಸ್ವಲ್ಪ ದೂರ ಹೋಗಿದ್ದ ಆದಿತ್ಯ ಹಿಂತಿರುಗಿದ್ದಾನೆ ಎಂದು ಆರೋಪಿಸಲಾಗಿದೆ.
![]() |
ಇದನ್ನೂ ಓದಿ – ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್ ಮಾಯ, ಸ್ವಲ್ಪ ಹೊತ್ತಿನಲ್ಲೇ ಕಾದಿತ್ತು ಮತ್ತೊಂದು ಶಾಕ್
ವಿ.ಸಿ.ಕೊಠಡಿಯಲ್ಲಿದ್ದ ಟಿವಿಯೊಂದಕ್ಕೆ ಕಲ್ಲಿನಿಂದ ಹೊಡೆದು ಹಾನಿ ಮಾಡಿದ್ದಾನೆ. ಅಷ್ಟರಲ್ಲಿ ಕೊಠಡಿಯಲ್ಲಿದ್ದ ಸಿಬ್ಬಂದಿ ಆದಿತ್ಯನನ್ನು ಹಿಡಿದಿದ್ದರು. ಆದರೆ ಅವರಿಂದ ತಪ್ಪಿಸಿಕೊಂಡು ಮತ್ತೊಂದು ಟಿವಿಯನ್ನು ಒಡೆದು ಹಾಕಿದ್ದಾನೆ. ಕೂಡಲೆ ಸಿಬ್ಬಂದಿ ಆದಿತ್ಯನನ್ನು ಹಿಡಿದು ಜೈಲರ್ ವಶಕ್ಕೆ ಒಪ್ಪಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಸ್ವತ್ತು ನಾಶ
ಜೈಲಿನಲಿದ್ದ ಎರಡು ಟಿವಿಗಳನ್ನು ಒಡೆದು ಹಾಕಿರುವ ಆದಿತ್ಯ ವಿರುದ್ಧ ಸಾರ್ವಜನಿಕ ಸ್ವತ್ತು ನಾಶಪಡಿಸಿದ ಆರೋಪದಲ್ಲಿ ದೂರು ನೀಡಲಾಗಿದೆ. ಜೈಲಿನ ಚೀಫ್ ಸೂಪರಿಂಟೆಂಡೆಂಟ್ ಅವರು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾನ್ಯನಲ್ಲ ಈ ಆದಿತ್ಯ
ಮಂಗಳೂರು ವಿಮಾನ ನಿಲ್ದಾಣದಲ್ಲಿ 2022ರ ಜನವರಿ 20ರಂದು ಐಇಡಿ ಬಾಂಬ್ ಇರುವ ಬ್ಯಾಗ್ ಪತ್ತೆಯಾಗಿತ್ತು. ಎರಡು ದಿನದ ಬಳಿಕ ಬೆಂಗಳೂರು ಪೊಲೀಸರು ಆದಿತ್ಯ ರಾವ್ ಎಂಬಾತನನ್ನು ಬಂಧಿಸಿದ್ದರು. ಮಂಗಳೂರಿನಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಆದಿತ್ಯ ರಾವ್ಗೆ 20 ವರ್ಷ ಜೈಲು ಶಿಕ್ಷೆಯಾಗಿದೆ. ಈತ ಶಿವಮೊಗ್ಗ ಜೈಲಿನ ಶಿಕ್ಷಾ ಬಂಧಿಯಾಗಿದ್ದಾನೆ.
ಇದನ್ನೂ ಓದಿ – ಮನೆಯಲ್ಲಿ ಚಿನ್ನಾಭರಣ, ಹಣ ಕಳ್ಳತನ, ಪೊಲೀಸರ ಬಲೆಗೆ ಬಿದ್ದಳು ಸೊಸೆ, ಸ್ನೇಹಿತನು ಅರೆಸ್ಟ್
ಆದಿತ್ಯ ರಾವ್ ಈ ಹಿಂದೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Airport), ರೈಲ್ವೆ ನಿಲ್ದಾಣಗಳಿಗೆ ಹುಸಿ ಬಾಂಬ್ ಕರೆ ಮಾಡಿದ್ದ. ಇದರಿಂದ ಸಾರ್ವಜನಿಕರು, ಪ್ರಯಾಣಿಕರು ತೀವ್ರ ಸಮಸ್ಯೆ ಅನುಭವಿಸಿದ್ದರು. ಈ ಪ್ರಕರಣಗಳಲ್ಲಿ ಆದಿತ್ಯ ರಾವ್ ಜೈಲು ಅನುಭವಿಸಿದ್ದ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200