ರಾಗಿಗುಡ್ಡ ಘಟನೆ ಬಗ್ಗೆ ವಾಟ್ಸಪ್‌ನಲ್ಲಿ ಫೋಟೊ, ವಿಡಿಯೋ ಷೇರ್‌ ಮಾಡುವಾಗ ಹುಷಾರ್‌, ಒಬ್ಬನ ವಿರುದ್ಧ ದಾಖಲಾಯ್ತು ಕೇಸ್‌

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 4 OCTOBER 2023

SHIMOGA : ರಾಗಿಗುಡ್ಡದಲ್ಲಿನ ಕಲ್ಲು ತೂರಾಟ ಘಟನೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ (Whatsapp) ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಪೊಲೀಸ್‌ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಎನ್‌ಕೌಂಟರ್‌ ಕುರಿತು ಸುಳ್ಳು ಮೆಸೇಜ್‌ ಕಳುಹಿಸಿದ ಒಬ್ಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ಎನ್‌ಕೌಂಟರ್‌ ಅಂತಾ ಸುಳ್ಳು ಸುದ್ದಿ

ರಾಗಿಗುಡ್ಡದಲ್ಲಿ ಪೊಲೀಸ್‌ ಎನ್‌ಕೌಂಟರ್‌ಗೆ ಯುವಕ ಬಲಿ ಎಂದು ವಾಟ್ಸಪ್‌ ಗ್ರೂಪ್‌ ಒಂದರಲ್ಲಿ ವ್ಯಕ್ತಿಯೊಬ್ಬ ಮೆಸೇಜ್‌ ಕಳುಹಿಸಿದ್ದ. ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸ್‌ ಇಲಾಖೆ ಅಲರ್ಟ್‌ ಆಗಿದೆ. ಮೆಸೇಜ್‌ ರವಾನಿಸಿದವನ ವಿರುದ್ಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲು ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಎನ್‌ಕೌಂಟರ್‌ ಎಂದು ಸುಳ್ಳು ಸುದ್ದಿ ಹಬ್ಬಿಸಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ. ಯಾರ ಎನ್‌ಕೌಂಟರ್‌ ಆಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತೋ ಆ ವ್ಯಕ್ತಿ ಕಲ್ಲು ತೂರಾಟ ವೇಳೆ ಗಾಯಗೊಂಡಿದ್ದರು. ಸದ್ಯ  ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಮಾತನಾಡಿಸಲಾಗಿದೆ ಎಂದು ತಿಳಿಸಿದರು.

ಹೊರ ರಾಜ್ಯದ ವಿಡಿಯೋಗಳು

ರಾಗಿಗುಡ್ಡದ ಘಟನೆ ಸಂಬಂಧ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೈಕಿ ಹಲವು ವಿಡಿಯೋಗಳು ಹೊರ ರಾಜ್ಯದ ಹಳೆಯ ವಿಡಿಯೋ ತುಣುಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಇಂತಹ ವಿಡಿಯೋಗಳನ್ನು ವೈರಲ್‌ ಮಾಡಿ ಸಾಮಾಜಿಕ ಸ್ವಸ್ಥ್ಯ ಕೆಡಿಸುವ ಪ್ರಯತ್ನವಾಗುತ್ತಿದೆ. ಅಂತಹವರ ವಿರುದ್ಧವು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment