ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಮೇ 2020
ಅಧಿಕೃತ ಪಾಸ್ ಇಲ್ಲದೆ ಅನ್ಯರಾಜ್ಯದಿಂದ ಶಿವಮೊಗ್ಗ ಜಿಲ್ಲೆಗೆ ಬಂದವರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ ಐವರ ವರುದ್ಧ ಕೇಸ್ ದಾಖಲಾಗಿದೆ. ಈ ಐವರು ಕರೋನ ಸೋಂಕಿಗೆ ತುತ್ತಾಗಿದ್ದಾರೆ.
ಕೇಸ್ 1 | ತೀರ್ಥಹಳ್ಳಿ ಪೊಲೀಸ್ ಠಾಣೆ
ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ NDMA ಕಾಯ್ದೆಯ ಸೆಕ್ಷನ್ 51(B) ಅನ್ವಯ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಈ ವ್ಯಕ್ತಿ ಅಧಿಕೃತ ಪಾಸ್ ಹೊಂದದೆ ತೀರ್ಥಹಳ್ಳಿ ತಾಲೂಕಿನ ಹಳ್ಳಿಬೈಲು ಮುಳುಬಾಗಿಲು ಗ್ರಾಮಕ್ಕೆ ಬಂದಿದ್ದರು. ಈ ವ್ಯಕ್ತಿಗೆ ಕರೋನ ಪಾಸಿಟಿವ್ ಬಂದಿದ್ದು, ತಾಲೂಕಿನಾದ್ಯಂತ ಆತಂಕ ಸೃಷ್ಟಿಯಾಗಿತ್ತು.
ಕೇಸ್ 2 | ತುಂಗಾ ನಗರ ಪೊಲೀಸ್ ಠಾಣೆ
ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಮೇ 18ರಂದು ಇವರು ತಮಿಳುನಾಡಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಇವರ ಬಳಿಯುವ ಅಧಿಕೃತ ಪಾಸ್ ಇರಲಿಲ್ಲ. ಈ ನಾಲ್ವರಿಗು ಈಗ ಕರೋನ ಸೋಂಕು ತಗುಲಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422