ಅಕ್ರಮವಾಗಿ ಮದ್ಯ ಮಾರಾಟ, ಜೂಜಾಟ, ಶಿವಮೊಗ್ಗ, ಭದ್ರಾವತಿಯಲ್ಲಿ ಹಲವರ ವಿರುದ್ಧ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | CRIME NEWS | 26 ಸೆಪ್ಟೆಂಬರ್ 2021

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ಮಾರಾಟ, ಜೂಜು ಮತ್ತು ಅಂದರ್ ಬಾಹರ್ ಆಡಿಸುತ್ತಿದ್ದವರ ವಿರುದ್ಧ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲು ಮಾಡಿದ್ದಾರೆ.

ತುಪ್ಪೂರಿನಲ್ಲಿ ಅಕ್ರಮ ಮದ್ಯ ಮಾರಾಟ

ಚೋರಡಿ ಸಮೀಪದ ತುಪ್ಪೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮದ್ಯ ಸೇವಿಸುತ್ತಿದ್ದವರು ಪರಾರಿಯಾಗಿದ್ದಾರೆ. ತುಪ್ಪೂರಿನ ಪ್ರತಾಪ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಎರಡು ಸಾವಿರ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಪ್ರತಾಪ್’ಗೆ ಮದ್ಯ ಪೂರೈಕೆ ಮಾಡಿದ ಆರೋಪದ ಮೇಲೆ ಬಾಬು ಎಂಬುವವರ ವಿರುದ್ಧವು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಆಸ್ಪತ್ರೆ ಪಕ್ಕದಲ್ಲಿ ಮಟ್ಕಾ

ಭದ್ರಾವತಿಯಲ್ಲಿ ಮಟ್ಕಾ ಆಡಿಸುತ್ತಿದ್ದವನ ವಿರುದ್ಧ ಪ್ರಕರಣ ದಾಖಲಾಗಿದೆ. ಓಲ್ಡ್ ಟೌನ್ ಸರ್ಕಾರಿ ಆಸ್ಪತ್ರೆ ಪಕ್ಕದಲ್ಲಿ ಮಟ್ಕಾ ಆಡಿಸಲಾಗುತಿತ್ತು. ಈ ಸಂಬಂಧ ಸಂತೋಷ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಓಲ್ಡ್ ಟೌನ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

1632381439867456 3

ಅಂದರ್ ಬಾಹರ್ ವಿರುದ್ಧ ಕೇಸ್

ಭದ್ರಾವತಿಯ ಹೆಬ್ಬಂಡಿಯ ತೋಟವೊಂದರಲ್ಲಿ ಅಂದರ್ ಬಾಹರ್ ಆಡಿಸುತ್ತಿರುವ ಬಗ್ಗೆ ಕೇಸ್ ದಾಖಲಾಗಿದೆ. ಕಿರಣ್ ಮತ್ತು ಇತರರು ಅಂದರ್ ಬಾಹರ್ ಆಡಿಸುತ್ತಿರುವ ಸಂಬಂಧ ದೂರು ದಾಖಲಾಗಿದೆ. ನ್ಯೂ ಟೌನ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜೂಜಾಟ ಆಡಿಸುತ್ತಿದ್ದವನ ವಿರುದ್ಧ ಕೇಸ್

ಭದ್ರಾವತಿ ತಾಲೂಕು ಸಿಂಗನಮನೆ ಗ್ರಾಮದಲ್ಲಿ ಜೂಜಾಟ ಆಡಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಮುನೀರ್ ಸಾಬ್ ಎಂಬುವವರು ಜೂಜಾಡಿಸುತ್ತಿದ್ದರು ಎಂದು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NH nephrolody%2Bad %2Bkannada 10

ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ

ಭದ್ರಾವತಿಯ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಲಕ್ಷಣ ಎಂಬುವವರ ವಿರುದ್ಧ ಕೇಸ್ ದಾಖಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2021

Leave a Comment