ಶಿವಮೊಗ್ಗ ಲೈವ್.ಕಾಂ |SHIMOGA NEWS | 23 ಅಕ್ಟೋಬರ್ 2021
ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ, ಹಣ ವಸೂಲಿ ಮಾಡಿದ ಪ್ರಕರಣ ಸಂಬಂಧ ಶಂಕಿತ ಉಗ್ರನ ಪತ್ನಿಯನ್ನು ಬಂಧಿಸಲಾಗಿದೆ. ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
![]() |
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಾಹಿರಾ ಬಾನು ಎಂಬಾಕೆಯನ್ನು ಬಂಧಿಸಲಾಗಿದೆ. ಈಕೆಯನ್ನು ವಿಚಾರಣೆಗೆ ಒಳಪಡಿಸಿ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.
ಏನಿದು ಪ್ರಕರಣ?
ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಜುಲೈ 14ರಂದು ಇಂಟರ್ನೆಟ್ ಕಾಲ್ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಕುಖ್ಯಾತ ರೌಡಿಶೀಟರ್ ಹೆಬ್ಬೆಟ್ ಮಂಜ ಎಂದು ಪರಿಚಯಿಸಿಕೊಂಡಿದ್ದ. ತನಗೆ 5 ಲಕ್ಷ ರೂ. ಹಣ ಬೇಕಿದೆ. ಎಂದು ಬೆದರಿಸಿದ್ದಾನೆ. ಅಷ್ಟೊಂದು ಹಣವಿಲ್ಲ ಎಂದು ಉದ್ಯಮಿ ಹೇಳಿದರೂ ಕೇಳದೆ ಜೀವ ಬೆದರಿಕೆ ಒಡ್ಡಿದ್ದಾನೆ. ಕೊನೆಗೆ ಕರೆ ಮಾಡಿದ್ದ ವ್ಯಕ್ತಿ ಹೇಳಿದ ಬ್ಯಾಂಕ್ ಖಾತೆಗೆ ಉದ್ಯಮಿಯು 50 ಸಾವಿರ ರೂ. ಹಣ ವರ್ಗಾಯಿಸಿದ್ದಾರೆ.
ಪುನಃ ಬಂದವು ಕರೆಗಳು, ಮೆಸೇಜ್
ಉದ್ಯಮಿಗೆ ಇತ್ತೀಚೆಗೆ ಪುನಃ ಅಪರಿಚಿತ ಮೊಬೈಲ್ ನಂಬರ್’ಗಳಿಂದ ಕರೆ ಮತ್ತು ಮೆಸೇಜುಗಳು ಬರಲು ಆರಂಭವಾಗಿದ್ದವು. ಆತಂಕಗೊಂಡ ಉದ್ಯಮಿ ಶಿವಮೊಗ್ಗದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಭಟ್ಕಳಕ್ಕೆ ತೆರಳಿ ಸಾಹೀರಾ ಬಾನು ಎಂಬಾಕೆಯನ್ನು ಬಂಧಿಸಿದ್ದಾರೆ.
ಶಂಕಿತ ಉಗ್ರನ ಪತ್ನಿ
ಸಾಹೀರಾ ಬಾನು ಪತಿ ಸದ್ದಾ ಹುಸೇನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸ್ಪೋಟಕಗಳನ್ನು ಪೂರೈಕೆ ಮಾಡಿದ ಆರೋಪ ಹೊತ್ತಿದ್ದಾನೆ. ಏಳು ವರ್ಷದಿಂದ ವಿಚಾರಣಾಧೀನ ಕೈದಿಯಾಗಿದ್ದಾನೆ. ಜೈಲಿನಲ್ಲಿದ್ದುಕೊಂಡೇ ಈತ ಉದ್ಯಮಿಗಳಿಗೆ ಬೆದರಿಕೆ ಕರೆ ಮಾಡಿ, ಪತ್ನಿಯ ಖಾತೆಗೆ ಹಣ ವರ್ಗಾಯಿಸಿರುವ ಶಂಕೆ ಇದೆ.
ಶಿವಮೊಗ್ಗ ಸಿಇಎನ್ ಠಾಣೆ ಇನ್ಸ್’ಪೆಕ್ಟರ್ ಕೆ.ಟಿ.ಗುರುರಾಜ್ ನೇತೃತ್ವದ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200