SHIVAMOGGA LIVE NEWS | 2 FEBRUARY 2023
SHIMOGA | ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Police Raid) ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 40 ಸಾವಿರ ರೂ. ಮೌಲ್ಯದ ಗಾಂಜಾ, ನಗದು, ಮೊಬೈಲ್, ದ್ವಿಚಕ್ರ ವಾಹನಗಳು, ಕಾರು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗದ ಮಲ್ಲಿಗೇನಹಳ್ಳಿಯ ವಾಜಪೇಯಿ ಲೇಔಟ್ ನಲ್ಲಿ ಯುವಕರ ಗುಂಪೊಂದು ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಯಾರೆಲ್ಲ ಅರೆಸ್ಟ್ ಆಗಿದ್ದಾರೆ?
ಆರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಕಾಮಾಕ್ಷಿ ಬೀದಿಯ ಮಂಜುನಾಥ್, ಅಣ್ಣಾ ನಗರದ ವಿಜಯ್ ಕುಮಾರ್, ಹೊಸನಗರದ ಗಿರೀಶ್, ವಿನೋಬನಗರದ ಸುಮನ್, ಚಿಕ್ಕಮಗಳೂರಿನ ಅಭಿಲಾಶ್, ಹಣಗೆರೆ ಕಟ್ಟೆಯ ಪವನ್ ಕುಮಾರ್ ಬಂಧಿತರು.
ಕೆ.ಜಿ.ಗಟ್ಟಲೆ ಗಾಂಜಾ ಸೀಜ್
ದಾಳಿ (Police Raid) ವೇಳೆ ಯುವಕರ ಬಳಿ 2 ಕೆ.ಜಿ 540 ಗ್ರಾಂ ತೂಕದ ಒಣ ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ 40 ಸಾವಿರ ರೂ. ಎಂದು ಅಂದಾಜಿಸಲಾಗಿದೆ. 73,950 ರೂ. ನಗದು ಸಿಕ್ಕಿದೆ. 6 ಮೊಬೈಲ್ ಫೋನ್ ಗಳು, 3 ದ್ವಿಚಕ್ರ ವಾಹನಗಳು, 1 ಕಾರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ – ಸ್ಮಶಾನದಲ್ಲಿ ಮಹಿಳೆಯ ಅಂತ್ಯಕ್ರಿಯೆ ಬೂದಿ ಕಣ್ಮರೆ, ಏನಿದು ಪ್ರಕರಣ?
ಸಿಇಎನ್ ಠಾಣೆ ಪಿಎಸ್ಐ ಮಂಜುನಾಥ್ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕೆಲಸದ ವಿಚಾರ, ಪೋಸ್ಟ್ ವೈರಲ್ ಬೆನ್ನಿಗೆ ಪೊಲೀಸರು ಅಲರ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200