ಶಿವಮೊಗ್ಗ ಜೈಲಿನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 NOVEMBER 2023

SHIMOGA : ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ (Central jail) ಕೈದಿಯೊಬ್ಬ  ಅನಾರೋಗ್ಯದಿಂದ ಗುರುವಾರ ಸಂಜೆ ಮೆಗ್ಗಾನ್ ಆಸ್ಪತೆಯಲ್ಲಿ ಮೃತಪಟ್ಟಿದ್ದಾನೆ.

ಮೆಗ್ಗಾನ್‌ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲು

ಉಡುಪಿಯ ರಾಜೇಂದ್ರ ನಾಯಕ್ (52) ಮೃತ ಕೈದಿ. ಅನಾರೋಗ್ಯದ ಕಾರಣ ಭಾನುವಾರ ಮೆಗ್ಗಾನ್ ಆಸ್ಪತ್ರೆಗೆ ರಾಜೇಂದ್ರನನ್ನು ಕರೆತಂದಿದ್ದ ಪೊಲೀಸರು ರಕ್ತ ಪರೀಕ್ಷೆ ಬಳಿಕ ವಾಪಸ್ ಕರೆದೊಯ್ದಿದ್ದರು. ಆದರೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಮತ್ತೆ ಬುಧವಾರ ಆಸ್ಪತ್ರೆಗೆ ಕರೆತಂದು ಒಳರೋಗಿಯಾಗಿ ದಾಖಲಿಸಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಇದನ್ನೂ ಓದಿ- ರಸ್ತೆ ಬದಿ ಬೈಕ್‌ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಮತ್ತೊಂದು ಬೈಕ್‌ ಡಿಕ್ಕಿ, ತಲೆಗೆ ತೀವ್ರ ಗಾಯ

ಉಡುಪಿಯ ಕೊಲೆ ಪ್ರಕರಣದಲ್ಲಿ ಶಿಕ್ಷೆ

ಉಡುಪಿ ಜಿಲ್ಲೆಯ ಹಂಗಾರಕಟ್ಟೆಯಲ್ಲಿ ಮೂರು ವರ್ಷದ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ರಾಜೇಂದ್ರ ನಾಯಕ್‌ಗೆ ಶಿಕ್ಷೆಯಾಗಿತ್ತು. ಹಾಗಾಗಿ ಅವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ (Central jail) ಸ್ಥಳಾಂತರಿಸಲಾಗಿತ್ತು. ಅಂದಿನಿಂದ ಸಜಾಬಂಧಿಯಾಗಿದ್ದ ರಾಜೇಂದ್ರ ನಾಯಕ್ ಕಳೆದ ಕೆಲ ವರ್ಷದಿಂದ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment