ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಸೋಮವಾರ ಸಂಜೆ ಘಟನೆ ಸಂಭವಿಸಿದ್ದು, ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೇಗಾಯ್ತು ಘಟನೆ?
ಸೊರಬ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಶಶಿ ಎಂಬುವವರು ರವೀಂದ್ರನಗರ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಪೂಜೆ ಮುಗಿಸಿ ರಾತ್ರಿ 7.50ರ ಹೊತ್ತಿಗೆ ದೇಗುಲ ಸಮೀಪವಿರುವ ತಮ್ಮ ಮನೆಗೆ ತೆರಳುತ್ತಿದ್ದರು. ದೇವಸ್ಥಾನದ ಬಳಿ ಬೈಕ್ನಲ್ಲಿ ಬಂದ ಇಬ್ಬರು, ಶಶಿ ಅವರ ಕುತ್ತಿಗೆಗೆ ಕೈ ಹಾಕಿ, ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಎರಡು ಎಳೆಯ ತಾಳಿ ಸರ
ಬೈಕ್ನಲ್ಲಿದ್ದವರು ಮಾಸ್ಕ್ ಧರಿಸಿದ್ದರು. ಕಳ್ಳರು ಕಿತ್ತುಕೊಳ್ಳಲು ಯತ್ನಿಸಿದಾಗ, ಶಶಿ ಅವರು ಮಾಂಗಲ್ಯ ಸರವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾರೆ. ಆದರೂ ಅವರಿಂದ ಮಾಂಗಲ್ಯ ಸರ ಬಿಡಿಸಿಕೊಂಡ ಕಳ್ಳರು ಅದನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಎರಡು ಎಳೆಯ ಚಿನ್ನದ ಮಾಂಗಲ್ಯ ಸರ ಸುಮಾರು 40 ಗ್ರಾಂ ತೂಕವಿತ್ತು. ಅದರ ಮೌಲ್ಯ 1.60 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]