ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020
ಶಿವಮೊಗ್ಗ ಸಿಟಿಯಲ್ಲಿ ಮತ್ತೊಮ್ಮೆ ಸರಗಳ್ಳರ ಹಾವಳಿ ಶುರುವಾಗಿದೆ. ಇವತ್ತು ಸಂಜೆ ಮತ್ತೊಂದು ಸರಗಳ್ಳತನ ಪ್ರಕರಣ ವರದಿಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್‍ನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ವೆಂಕಟೇಶನಗರದ 3ನೇ ಅಡ್ಡರಸ್ತೆಯಲ್ಲಿ ಇವತ್ತು ಸಂಜೆ 6.15ರ ಹೊತ್ತಿಗೆ ಘಟನೆ ಸಂಭವಿಸಿದೆ.
ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ರಾಜೇಶ್ವರಿ ಅವರ ಮಾಂಗಲ್ಯ ಸರವನ್ನು ಕಳ್ಳತನ ಮಾಡಲಾಗಿದೆ. 40 ಗ್ರಾಂ ತೂಕದ 1.60 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳತನ ಮಾಡಲಾಗಿದೆ.
ಬೈಕ್‍ನಲ್ಲಿ ಬಂದರು, ಮಾಸ್ಕ್ ಹಾಕಿದ್ದರು
ಮಾಸ್ಕ್ ಧರಿಸಿಕೊಂಡು ಬೈಕ್‍ನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಮೊದಲಿಗೆ ರಾಜೇಶ್ವರಿ ಸಮೀಪಕ್ಕೆ ಬಂದು ಸ್ವಲ್ಪ ದೂರ ಸಾಗಿದ್ದಾರೆ. ಬೈಕನ್ನು ಹಿಂದಕ್ಕೆ ತಿರುಗಿಸಿಕೊಂಡು ಬಂದು, ರಾಜೇಶ್ವರಿ ಅವರ ಕುತ್ತಿಗೆಗೆ ಕೈ ಹಾಕಿ ಮಾಂಗಲ್ಯ ಸರ ಕಿತ್ತುಕೊಂಡು, ವೇಗವಾಗಿ ಬೈಕ್ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ.
ವಾರದಲ್ಲಿ ಎರಡನೆ ಪ್ರಕರಣ
ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೆ ವಾರದಲ್ಲಿ ಇದು ಎರಡನೇ ಸರಗಳ್ಳತನ ಪ್ರಕರಣವಾಗಿದೆ. ಸೋಮವಾರ ಸಂಜೆ ರವೀಂದ್ರನಗರ ಗಣಪತಿ ದೇವಸ್ಥಾನ ಸಮೀಪ ಶಿಕ್ಷಕಿಯೊಬ್ಬರ ಮಾಂಗಲ್ಯ ಸರ ಕಳ್ಳತನ ಮಾಡಲಾಗಿತ್ತು.
ವೆಂಕಟೇಶನಗರದಲ್ಲಿನ ಸರಗಳ್ಳತನ ಪ್ರಕರಣ ಸಂಬಂಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]