ಶಿವಮೊಗ್ಗದ ಮಹಿಳೆಯರೆ ಎಚ್ಚರ, ವಾಕಿಂಗ್‌ ವೇಳೆ ನಡೆಯಿತು ದುಷ್ಕೃತ್ಯ, ದೂರು ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕೆಂಚಪ್ಪ ಬಡಾವಣೆಯ ಅಂಗನವಾಡಿ ಸಮೀಪ ವಾಕಿಂಗ್‌ ಮಾಡುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು (Chain snatching) ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವವರಿಗೆ GOOD NEWS, ಇಲ್ಲಿದೆ ಉತ್ತಮ ವೇತನದ ಉದ್ಯೋಗ

ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದ ಜಯಲಕ್ಷ್ಮಿ ಎಂಬುವವರನ್ನು ಹಿಂಬಾಲಿಸಿದ ಇಬ್ಬರು ಅಪರಿಚಿತರು, ಅವರ ಕೊರಳಲ್ಲಿದ್ದ ಸುಮಾರು 15 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಜಯಲಕ್ಷ್ಮಿ ಅವರನ್ನು ಕೆಳಕ್ಕೆ ತಳ್ಳಿದ್ದು, ಅವರು ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರಿಂದ ಸರವು ತುಂಡಾಗಿದೆ.

ಕಳ್ಳರು ಅರ್ಧದಷ್ಟು ಸರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಕಳುವಾದ ಚಿನ್ನದ ಸರದ ಮೌಲ್ಯ ₹1,80,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment