ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 12 ಸೆಪ್ಟಂಬರ್ 2020
ಶಿವಮೊಗ್ಗ ನಗರದಲ್ಲಿ ಮತ್ತೊಂದು ಸರಗಳ್ಳತನ ಪ್ರಕರಣ ವರದಿಯಾಗಿದೆ. ಒಂದೆ ವಾರದಲ್ಲಿ ಇದು ಮೂರನೆ ಪ್ರಕರಣವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಓಲ್ ಬಾರ್ ಲೈನ್ ರಸ್ತೆಯಲ್ಲಿ ಆರ್ ಡಿ ಸಂಗ್ರಹಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದಾಗ, ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಯುವಕರು, ಮಹಿಳೆಯೊಬ್ಬರ ಮಾಂಗಲ್ಯ ಸರ ಅಪಹರಿಸಿದ್ದಾರೆ. ಶುಕ್ರವಾರ ಸಂಜೆ ಘಟನೆ ನಡೆದಿದೆ.
ಜಾಹ್ನವಿ ಎಂಬುವವರೇ ಮಾಂಗಲ್ಯ ಸರ ಕಳೆದುಕೊಂಡವರು. ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿರುವ ಆರ್ ಡಿ ಹಣ ಸಂಗ್ರಹಿಸಿ ಕೋಟೆ ರಸ್ತೆಯಲ್ಲಿರುವ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. 20 ಗ್ರಾಮ್ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]