ಶಿವಮೊಗ್ಗ ನಗರದಲ್ಲಿ ಮುಂದುವರೆದ ಸರಗಳ್ಳರ ಅಟ್ಟಹಾಸ, ವಾರದಲ್ಲಿ ಮೂರನೆ ಕೇಸ್

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 12 ಸೆಪ್ಟಂಬರ್ 2020

ಶಿವಮೊಗ್ಗ ನಗರದಲ್ಲಿ ಮತ್ತೊಂದು ಸರಗಳ್ಳತನ ಪ್ರಕರಣ ವರದಿಯಾಗಿದೆ. ಒಂದೆ ವಾರದಲ್ಲಿ ಇದು ಮೂರನೆ ಪ್ರಕರಣವಾಗಿದೆ.

ನಗರದ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಓಲ್ ಬಾರ್ ಲೈನ್ ರಸ್ತೆಯಲ್ಲಿ ಆರ್ ಡಿ ಸಂಗ್ರಹಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದಾಗ, ಪಲ್ಸರ್ ಬೈಕ್ ನಲ್ಲಿ ಬಂದ ಇಬ್ಬರು ಯುವಕರು, ಮಹಿಳೆಯೊಬ್ಬರ ಮಾಂಗಲ್ಯ ಸರ ಅಪಹರಿಸಿದ್ದಾರೆ. ಶುಕ್ರವಾರ ಸಂಜೆ ಘಟನೆ ನಡೆದಿದೆ.

ಜಾಹ್ನವಿ ಎಂಬುವವರೇ ಮಾಂಗಲ್ಯ ಸರ‌ ಕಳೆದುಕೊಂಡವರು. ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿರುವ‌ ಆರ್ ಡಿ ಹಣ ಸಂಗ್ರಹಿಸಿ ಕೋಟೆ ರಸ್ತೆಯಲ್ಲಿರುವ ಮನೆಗೆ ಹೋಗುವಾಗ ಈ ಘಟನೆ ನಡೆದಿದೆ. 20 ಗ್ರಾಮ್ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : September 12, 2020 at 8:35 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಸೆಪ್ಟೆಂಬರ್ 12, 2020

Leave a Comment