ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HIGHLITES
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
- ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮಹಿಳೆಯ ಸರಗಳ್ಳತನ
- ವಿಳಾಸ ಕೇಳುವ ನೆಪದಲ್ಲಿ ನಡೆಯಿತು ಕೃತ್ಯ
- ಬೈಕ್‌ನಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಕಳ್ಳತನ
SHIVAMOGGA LIVE NEWS | 4 APRIL 2024
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
SHIMOGA : ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರ ಸರಗಳ್ಳತನ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು ದುಷ್ಕೃತ್ಯ ಎಸಗಿದ್ದಾರೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯ ಗೇಟ್‌ನಲ್ಲಿರುವ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
ಮಲ್ಲೇಶ್ವರನಗರದಲ್ಲಿ ಬೆಳಗ್ಗೆ 5 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಬಂದ ಇಬ್ಬರು ವಿಳಾಸ ಕೇಳುವ ನೆಪದಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಒಬ್ಬಾತ ಬೈಕ್‌ನಿಂದ ಕೆಳಗಿಳಿದು ಮಹಿಳೆಯೊಬ್ಬರ ಕೊರಳಲ್ಲಿದ್ದ 30 ಗ್ರಾಂ ತೂಕದ ಬಂಗಾರದ ಸರ ಕಸಿದುಕೊಂಡಿದ್ದಾನೆ. ಇಬ್ಬರು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.
ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಇನ್ನು, ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲ್ಲೇಶ್ವರದ ನಗರದಲ್ಲಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆ ಮುಂದೆ ಘಟನೆ ಸಂಭವಿಸಿದೆ. ಅವರ ಮನೆ ಗೇಟ್ ಬಳಿ ಇರುವ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಕೋಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಈಶ್ವರಪ್ಪಗೆ ಭಾರಿ ನಿರಾಸೆ, ದೆಹಲಿಯಿಂದ ಶಿವಮೊಗ್ಗಕ್ಕೆ ಬರಿಗೈಲಿ ವಾಪಸ್, ಮುಂದೇನು?