ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 MAY 2023
SHIMOGA : ಚೋರಡಿಯಲ್ಲಿ ಭೀಕರ ಅಪಘಾತದ (Mishap) ಮಾಹಿತಿ ತಿಳಿಯುತ್ತಿದ್ದಂತೆ ಸಂಸದ ಬಿ.ವೈ.ರಾಘವೇಂದ್ರ, ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಘಟನೆ ಕುರಿತು ಮಾಹಿತಿ ಪಡೆದರು.
ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಿಕಾರಿಪುರದ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಂದ ಘಟನೆಯ ಮಾಹಿತಿ ಪಡೆದು, ಧೈರ್ಯ ಹೇಳಿದರು.
ಇದನ್ನೂ ಓದಿ – ಚೋರಡಿ ಬಳಿ ಭೀಕರ ಅಪಘಾತ, ಪ್ರತ್ಯಕ್ಷದರ್ಶಿ ಹೇಳಿದ್ದೇನು? ಹೇಗಾಯ್ತ ಆಕ್ಸಿಡೆಂಟ್?
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಇದೊಂದು ನೋವಿನ ಘಟನೆ. ಚಾಲಕ ಅತಿ ವೇಗವಾಗಿ ಬಸ್ ಚಲಾಯಿಸುತ್ತಿದ್ದ ಮತ್ತು ಮೊಬೈಲ್ನಲ್ಲಿ ಮಾತನಾಡುತ್ತಿದ್ದ ಎಂದು ಕೆಲವರು ಆರೋಪಿಸಿದ್ದಾರೆ. ಇದು ತನಿಖೆಯಿಂದ ಗೊತ್ತಾಗಬೇಕಿದೆ. ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಇನ್ನು, ಅಪಘಾತದ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮೆಗ್ಗಾನ್ ಆಸ್ಪತ್ರೆಗೆ ಆಗಮಿಸಿ, ಗಾಯಾಳುಗಳಿಂದ ಮಾಹಿತಿ ಪಡೆದರು.
ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಾಲ್ವರನ್ನು ಐಸಿಯುಗೆ ದಾಖಲು ಮಾಡಲಾಗಿದೆ. ಅಗತ್ಯವಿದ್ದರೆ ವೈದ್ಯರ ನಿರ್ಧಾರದ ಮೇಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ ಎಂದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮಾತನಾಡಿ, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಚಾಲಕನ ಪಕ್ಕದಲ್ಲಿದ್ದ ವ್ಯಕ್ತಿಯ ಹೇಳಿಕೆಗಳು ನಮಗೆ ಸಾಕ್ಷಿಯಾಗಲಿವೆ. ಅಪಘಾತ ನಡೆದ ಸ್ಥಳದಲ್ಲಿ ರಸ್ತೆ ಸುರಕ್ಷತೆ ಕುರಿತು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ – ಚೋರಡಿ ಅಪಘಾತ ಕೇಸ್, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೇಶ್ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422