ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 MAY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ (Officer) ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು ಶಿವಮೊಗ್ಗಕ್ಕೆ ಆಗಮಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚಪ್ಪ ಲೇಔಟ್ನಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮನೆಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿದೆ. ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್ಪಿ ಮೊಹಮ್ಮದ್ ರಫಿ ನೇತೃತ್ವದ ಆರು ಮಂದಿ ತಂಡ ಆಗಮಿಸಿದೆ. ಮೃತ ಅಧಿಕಾರಿ ಚಂದ್ರಶೇಖರನ್ ಅವರ ಪತ್ನಿ ಕವಿತಾ ಅವರಿಂದ ಮಾಹಿತಿ ಸಂಗ್ರಹಿಸಲಾಗಿದೆ.
ಪೆನ್ ಡ್ರೈವ್ ವಶಕ್ಕೆ
ಕುಟುಂಬದವರಿಂದ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳು, ಚಂದ್ರಶೇಖರನ್ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಮನೆಯಲ್ಲಿದ್ದ ಪೆನ್ ಡ್ರೈವ್ ಒಂದನ್ನು ವಶಕ್ಕೆ ಪಡೆಯಲಾಗಿದೆ. ಅದರ ಮೇಲೆ ಪದ್ಮನಾಭ್ ಎಂದು ಬರೆದಿದೆ ಎನ್ನಲಾಗಿದೆ. ಇನ್ನು, ಪೆನ್ ಒಂದನ್ನು ವಶಕ್ಕೆಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಚಂದ್ರಶೇಖರನ್ ಪತ್ನಿ ಹೇಳಿದ್ದೇನು?
ಇನ್ನು, ಸಿಐಡಿ ಅಧಿಕಾರಿಗಳು ಭೇಟಿ ನೀಡಿದ್ದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಚಂದ್ರಶೇಖರನ್ ಪತ್ನಿ ಕವಿತಾ, ಸಿಐಡಿ ಅಧಿಕಾರಿಗಳು ಸುಮಾರು 45 ನಿಮಿಷ ವಿಚಾರಣೆ ನಡೆಸಿದರು. ಮನೆಯಲ್ಲಿದ್ದ ಪದ್ಮನಾಭ ಹೆಸರಿನ ಪೆನ್ ಡ್ರೈವ್ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಏನಿದೆ ಅನ್ನುವುದು ನಮಗೆ ತಿಳಿಯಬೇಕು. ಡೆತ್ ನೋಟ್ ಬರೆದ ಪೆನ್ ವಶಕ್ಕೆ ಪಡೆದುಕೊಂಡಿದ್ದಾರೆ. ಪತಿಯ ಸ್ವಭಾವದ ಕುರಿತು ಮಾಹಿತಿ ಕೇಳಿದರು. ಅವರು ದಕ್ಷ ಅಧಿಕಾರಿ ಅನ್ನುವುದು ಸಿಐಡಿ ಅವರಿಗು ಮನವರಿಕೆಯಾಗಿದೆ.
ಇದನ್ನೂ ಓದಿ – ಗಾಂಧಿ ಬಜಾರ್ನಲ್ಲಿ ಹಾಡಹಗಲೆ ಮಹಿಳೆಗೆ ಮಂಕು ಕವಿಯುವಂತೆ ಮಾಡಿದ ಕಳ್ಳಿಯರು, ಮುಂದೇನಾಯ್ತು?