ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 16 OCTOBER 2024 : ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್ (BUS) ಚರಂಡಿಗೆ ಪಲ್ಟಿಯಾಗಿದೆ. ಶಿವಮಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ಇಂದು ಬಳೆಗ್ಗೆ ಘಟನೆ ಸಂಭವಿಸಿದೆ.
ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20 ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಿಟಿ ಬಸ್ಸು ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ತೆರಳುತ್ತಿತ್ತು. ರೈಲ್ವೆ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಫೆನ್ಸ್‌ಗೆ ಅಪ್ಪಳಿಸಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ಸರ್ಜಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


ಇದನ್ನೂ ಓದಿ » ಶಿವಮೊಗ್ಗಕ್ಕೆ ಇವತ್ತು ಯಲ್ಲೋ ಅಲರ್ಟ್, ಎಲ್ಲೆಲ್ಲಿ ಎಷ್ಟು ಹೊತ್ತಿಗೆ ಮಳೆಯಾಗಿತ್ತೆ?
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





