ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 DECEMBER 2020
ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿ ಖೈದಿಯೊಬ್ಬ ಮೂವರು ಖೈದಿಗಳಿಗೆ ಇರಿದು, ಗಂಭೀರವಾಗಿ ಗಾಯಗೊಳಿಸಿದ್ದಾನೆ. ಮೂವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಏನಿದು ಘಟನೆ? ಹೇಗಾಯ್ತು?
ಕ್ಷುಲಕ ವಿಚಾರಕ್ಕೆ ಕೇಂದ್ರ ಕಾರಾಗೃಹದಲ್ಲಿ ಇವತ್ತು ಸಜಾಬಂಧಿಗಳ ನಡುವೆ ಜಗಳವಾಗಿದೆ. ಜಗಳ ಬಿಡಿಸಲು ಹೋದ ಮೂವರು ಖೈದಿಗಳ ಮೇಲೆ ಪ್ರಶಾಂತ್ ಎಂಬಾತ ಇರಿದಿದ್ದಾನೆ. ಗಾಯಗೊಂಡಿರುವ ಮಾಲತೇಶ್, ದೇವೇಂದ್ರ, ಬೆನಕಶೆಟ್ಟಿ ಎಂಬುವವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಚಮಚನೇ ಆಯುಧ ಮಾಡಿಕೊಂಡ
ಗಲಾಟೆ ವೇಳೆ ಪ್ರಶಾಂತ್, ಚಮಚವನ್ನೇ ಆಯುಧ ಮಾಡಿಕೊಂಡಿದ್ದಾನೆ. ಚಮಚವನ್ನು ಚಾಕು ರೀತಿಯಲ್ಲಿ ಬಳಸಿಕೊಂಡು ಮೂವರ ಮೇಲೆ ಹಲ್ಲೆ ನಡೆಸಿದ್ದಾನೆ. ಕೂಡಲೇ ಜೈಲು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಗಲಾಟೆ ಬಿಡಿಸಿದ್ದು, ಮೂವರನ್ನೂ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಯಾರಿದು ಪ್ರಶಾಂತ್?
ನ್ಯಾಯಾಧೀಶರಿಗೆ ನಿಂದಿಸಿ ಪ್ರಶಾಂತ್ ಶಿಕ್ಷೆಗೊಳಗಾಗಿದ್ದಾನೆ. ಜೈಲಿಗೆ ಬಂದಾಗಿನಿಂದ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





