ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 APRIL 2023
SHIMOGA : ಮಕ್ಕಳ ಬಟ್ಟೆ ಸೈಸ್ ವ್ಯತ್ಯಾಸವಾಗಿದ್ದು ಬದಲು ಮಾಡಿಕೊಡುವಂತೆ ಬಂದ ಗ್ರಾಹಕ ಮತ್ತು ಅಂಗಡಿ (Shop) ಮಾಲೀಕನ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಗಾಂಧಿ ಬಜಾರ್‍ನ ಬಟ್ಟೆ ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಅಂಗಡಿಯೊಂದರಲ್ಲಿ (Shop) ಅಬ್ದುಲ್ ಖಾದರ್ ಅವರ ಮನೆಯ ಮಕ್ಕಳಿಗೆ ಬಟ್ಟೆ ಖರೀದಿಸಲಾಗಿತ್ತು. ಆದರೆ ಮನೆಗೆ ಕೊಂಡೊಯ್ದಾಗ ಸೈಸ್ ವ್ಯತ್ಯಸವಾಗಿತ್ತು. ಮರುದಿನ ಬಟ್ಟೆ ಬದಲಾಯಿಸಿಕೊಂಡು ಹೋಗಲು ಅಬ್ದುಲ್ ಖಾದರ್ ಮತ್ತು ಅವರ ಸೊಸೆ ಬಂದಿದ್ದರು. ಈ ವೇಳೆ ಅಂಗಡಿ ಮಾಲೀಕ ಮತ್ತು ಅಬ್ದುಲ್ ಖಾದರ್ ಅವರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಇದನ್ನೂ ಓದಿ – ಕಂಬದ ಮೇಲೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಕೆಳಗೆ ಬಿದ್ದು ಸಾವು, ಶಿವಮೊಗ್ಗದಲ್ಲಿ ಪ್ರಕರಣ ದಾಖಲು
ಅಂಗಡಿ ಮಾಲೀಕ ಮತ್ತು ಅಂಗಡಿಯಲ್ಲಿ ಇದ್ದವರು ಅಬ್ದುಲ್ ಖಾದರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



