ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021
ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗದ ಹರಿಗೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಹಿಂಬಾಲಿಸಿ ಬಂದ ಹಲ್ಲೆಕೋರರು ಗೋಪಿ ಸರ್ಕಲ್’ನಲ್ಲಿ ಪುನಃ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ನಿರಂಜನ ಅಲಿಯಾಸ್ ಶಕೆ ಎಂಬಾತನ ಮೇಲೆ ಹಲ್ಲೆ ಮಾಡಲಾಗಿದೆ. ತೊಡೆ, ಎಡ ತೋಳಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ನಿರಂಜನನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏನಿದು ಪ್ರಕರಣ? ಯಾಕಾಯ್ತು ಹಲ್ಲೆ?
ನಿರಂಜನ ಮತ್ತು ಅರುಣ್ ಅಲಿಯಾಸ್ ಗೂನ ಎಂಬಾತನ ಮಧ್ಯೆ ಮುಂಚಿನಿಂದಲೂ ಜಗಳವಾಗುತಿತ್ತು ಎಂದು ಹೇಳಲಾಗುತ್ತಿದೆ. ಮಂಗಳವಾರ ರಾತ್ರಿ ಹರಿಗೆಯ ಖಾಲಿ ಲೇಔಟ್’ನಲ್ಲಿ ನಿರಂಜನ್ ತನ್ನ ಸ್ನೇಹಿತನೊಂದಿಗೆ ವಾಕಿಂಗ್ ಮಾಡುತ್ತಿದ್ದಾಗ ಅರುಣ್ ಮತ್ತು ಆತನ ಸ್ನೇಹಿತ ಪರಶುರಾಮ ಎಂಬಾತ ಬಂದಿದ್ದಾರೆ. ಅವಾಚ್ಯವಾಗಿ ಬೈದು, ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ನಿರಂಜನನ ತೊಡೆ, ಎಡ ತೋಳಿಗೆ ಗಾಯವಾಗಿದೆ. ಗಲಾಟೆ ಬಿಡಿಸಲು ಹೋದ ನಿರಂಜನನ ಸ್ನೇಹಿತ ಸುನಿಲ್’ಗೆ ಹೊಡೆದು, ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಗೋಪಿ ಸರ್ಕಲ್ ಮತ್ತೆ ಹಲ್ಲೆ
ಗಾಯಗೊಂಡಿದ್ದ ನಿರಂಜನನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತಿತ್ತು. ಹಿಂಬಾಲಿಸಿ ಬಂದ ಅರುಣ್, ಪರಶುರಾಮ ಮತ್ತು ಆತನ ಕಡೆಯವರು ಗೋಪಿ ಸರ್ಕಲ್’ನಲ್ಲಿ ಪುನಃ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






