ಶಿವಮೊಗ್ಗ ವಿದ್ಯಾನಗರದಲ್ಲಿ ಯುವಕರ ಮಧ್ಯೆ ಕಿರಿಕ್, ಜಗಳ ಬಿಡಿಸಲು ಹೋದ ಸ್ನೇಹಿತನಿಗೆ ಗಂಭೀರ ಗಾಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಕ್ಷುಲಕ ಕಾರಣಕ್ಕೆ ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕರ ನಡುವೆ ಗಲಾಟೆಯಾಗಿದೆ. ಘಟನೆಯಲ್ಲಿ ಓರ್ವ ಯುವಕನಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ರಾಜೀವ್ ಗಾಂಧಿ ಬಡಾವಣೆಯ ಚಿತಾಗಾರದ ಬಳಿ ಗಲಾಟೆ ಸಂಭವಿಸಿದೆ. ಪರಶುರಾಮ್, ಅಬ್ಬು, ತಿಪ್ಪಗೆ ಸಾದಿಕ್, ಅಂಗೂರಿ ಸೇರಿದಂತೆ ಕೆಲವರು ಮಾಲತೇಶ್ ಎಂಬಾತನ ಜೊತೆಗೆ ಜಗಳವಾಡುತ್ತಿದ್ದರು.

ಇದೆ ದಾರಿಯಲ್ಲಿ ಬಂದ ಮಾಲತೇಶ್‍ನ ಸ್ನೇಹಿತರಾದ ಗುರುರಾಜ್, ತಿಲಕ್, ದರ್ಶನ್ ಅವರು ಜಗಳ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಪರಶುರಾಮ್ ಎಂಬಾತ ದರ್ಶನ್‍ಗೆ ಹೊಡೆದಿದ್ದರಿಂದ ಗಂಭೀರ ಗಾಯಗೊಂಡದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೂಡಲೆ ದರ್ಶನ್‍ನನ್ನು ಬಿ.ಹೆಚ್‍.ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಕೆ ನಡೆಯುತ್ತಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!