ಕೋರ್ಟ್‌ ಮೊರೆ ಹೋದ ಈಶ್ವರಪ್ಪ, ಜಯನಗರ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ, ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 9 MAY 2024

SHIMOGA : ಲೋಕಸಭೆ ಚುನಾವಣೆ ಮುನ್ನಾ ದಿನ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈ‍ಶ್ವರಪ್ಪ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಬೆಂಬಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಈ ಸಂಬಂಧ ನ್ಯಾಯಾಲಯದ ಸೂಚನೆ ಮೇರೆಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮತದಾರರಲ್ಲಿ ಗೊಂದಲ ಸೃಷ್ಟಿಸಲು ಫೇಸ್‌ಬುಕ್‌, ವಾಟ್ಸಪ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಲಾಗಿದೆ. ಇದು ಚುನಾವಣೆ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಪ ಪ್ರಚಾರ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸುವಂತೆ ಪೊಲೀಸ್‌ ಇಲಾಖೆಗೆ ಸೂಚಿಸಿತ್ತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರು, ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್‌ ರೂಂ ಸೀಲ್‌

Leave a Comment