ಅಮೀರ್‌ ಅಹಮದ್‌ ಸರ್ಕಲ್‌ನಲ್ಲಿ ಅಲಂಕಾರದ ವಿಚಾರದಲ್ಲಿ ಗೊಂದಲ, ಜಮಾವಣೆಯಾದ ಜನ, ಸದ್ಯ ಪರಿಸ್ಥಿತಿ ಶಾಂತ

SHIVAMOGGA LIVE NEWS | 30 SEPTEMBER 2023

SHIMOGA : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ನಗರದ ಅಮೀರ್‌ ಅಹಮದ್‌ ಸರ್ಕಲ್‌ ಮತ್ತು ಶಿವಪ್ಪನಾಯಕ ಪ್ರತಿಮೆ ಸಮೀಪ ಮಾಡಿದ್ದ ಅಲಂಕಾರ (Decoration) ತೆರವು ವಿಚಾರ ಗೊಂದಲಕ್ಕೆ ಕಾರಣವಾಗಿತ್ತು. ಇದರಿಂದ ಶುಕ್ರವಾರ ರಾತ್ರಿ ಸರ್ಕಲ್‌ ಸಮೀಪ ಎರಡು ಕಡೆಯ ಯುವಕರು ಗಂಪುಗೂಡಿ ಘೋಷಣೆ ಕೂಗಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ ಭೇಟಿ ನೀಡಿ ಎರಡೂ ಕಡೆಯವರನ್ನು ಸಮಾಧಾನಪಡಿಸಿದರು.

ಇದನ್ನೂ ಓದಿ – JOBS – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ

Kalleshwara-Enterprises.webp

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಅಲಂಕಾರ ಸಂಬಂಧ ಗೊಂದಲ ಉಂಟಾಗಿತ್ತು. ಎರಡೂ ಕಡೆಯವರ ಜೊತೆಗೆ ಮಾತನಾಡಿದ್ದು, ಸಾಮಾಧಾನಪಡಿಸಲಾಗಿದೆ. ಸಮಸ್ಯೆ ಬಗೆಹರಿದಿದೆ. ಸದ್ಯ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ತಿಳಿಸಿದರು.

ವಾಟ್ಸಪ್‌ಗಳಲ್ಲಿ ಶಾಂತಿ ಸಂದೇಶ

ಇನ್ನು, ಎರಡು ಸಮುದಾಯದ ಮುಖಂಡರ ಜೊತೆಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಚರ್ಚೆ ನಡೆಸಿದರು. ಆ ಬಳಿಕ ಎರಡು ಸಮುದಾಯದ ಮುಖಂಡರು ವಾಟ್ಸಪ್‌ ಗ್ರೂಪ್‌ಗಳಲ್ಲಿ ಶಾಂತಿಯ ಸಂದೇಶ ರವಾನಿಸಿದ್ದಾರೆ. ಯುವಕರು ಶಾಂತಿಯುತವಾಗಿ ಇರುವಂತೆ ಮೆಸೇಜ್‌ ರವಾನಿಸಿದ್ದಾರೆ.

ಇದನ್ನೂ ಓದಿ – 314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ ರೈಲುಗಳ ಸಮಯ ಬದಲು?

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment