ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಆಗಸ್ಟ್ 2020
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಾಚ್ಯವಾಗಿ ನಿಂದಿಸಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಪ್ರಕಟಿಸಿದ್ದ ಆರೋಪದ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರನನ್ನು ಬಂಧಿಸಲಾಗಿದೆ. ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದೀಪಕ್ ಸಿಂಗ್, ಬಂಧಿತರು. ಇವರು ಫೇಸ್‍ಬುಕ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಪೋಸ್ಟ್ ಪ್ರಕಟಿಸಿದ್ದರು ಎಂದು ಬಿಜೆಪಿ ಯುವ ಮೋರ್ಚಾ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಐಪಿಸಿ 504, 505 ಕಾಯ್ದೆ ಅಡಿಯಲ್ಲಿ ದೀಪಕ್ ಸಿಂಗ್ ಅವರನ್ನು ಬಂಧಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದರು ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಟಿ.ಆರ್.ಜಗನ್ನಾಥ್ ಅವರು ದೂರು ನೀಡಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422