ಶಿವಮೊಗ್ಗ ಲೈವ್.ಕಾಂ | SAGARA NEWS | 23 ಸೆಪ್ಟೆಂಬರ್ 2021
ಮತಾಂತರ ನಿಷೇಧ ಕಾಯ್ದೆ ರೂಪಿಸುವ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ. ಈ ನಡುವೆ ಮಹಿಳೆಯೊಬ್ಬರನ್ನು ಬಲವಂತವಾಗಿ ಮತಾಂತರಕ್ಕೆ ಯತ್ನಿಸಲಾಗಿದೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಸಾಗರ ತಾಲೂಕು ತಾಳಗುಪ್ಪದಲ್ಲಿ ಮಹಿಳೆಯೊಬ್ಬರನ್ನು ಮತಾಂತರ ಮಾಡುವ ಪ್ರಯತ್ನವಾಗಿದೆ. ಆಕ್ರೋಶಗೊಂಡ ಮಹಿಳೆ ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಷ್ಟೆ ಅಲ್ಲ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಏನಿದು ಪ್ರಕರಣ?
ತಾಳಗುಪ್ಪ ಶೆಟ್ಟರಕೇರಿಯ ಜ್ಯೋತಿ ಎಂಬುವವರ ಮತಾಂತರಕ್ಕೆ ಯತ್ನಿಸಲಾಗಿದೆ. ಪತಿ ಮೃತರಾಗಿದ್ದು ಜ್ಯೋತಿ ಅವರು ತಮ್ಮ ಮಕ್ಕಳೊಂದಿಗೆ ವಾಸವಾಗಿದ್ದಾರೆ. ಜೋಗ ಗ್ರಾಮದ ಅನಿಲ್ ಕುಮಾರ್ ಮತ್ತು ಪ್ರಶಾಂತಿ ಎಂಬುವವರು ಜ್ಯೋತಿಯವರ ಸಮಸ್ಯೆಗಳನ್ನು ತಿಳಿದುಕೊಂಡು ಮತಾಂತರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಜ್ಯೋತಿ ಅವರ ಮನೆಗೆ ಬಂದಿದ್ದ ಅನಿಲ್ ಕುಮಾರ್ ಮತ್ತು ಪ್ರಶಾಂತಿ, ನೀವು ಕ್ರಿಶ್ಚಿಯನ್ ಧರ್ಮಕ್ಕೆ ಬಂದರೆ ನಿಮ್ಮ ಕಷ್ಟಗಳು ಪರಿಹಾರವಾಗಲಿದೆ. ಮನೆಯಲ್ಲಿರುವ ದೇವರ ಫೋಟೊಗಳನ್ನು ತೆಗೆಯಿರಿ ಎಂದು ಒತ್ತಾಯಿಸಿದ್ದಾರೆ. ಕ್ರಿಶ್ಚಿಯನ್ ಧರ್ಮ ಸಂಬಂಧ ಕೆಲವು ಪುಸ್ತಕಗಳನ್ನು ಕೈಗಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಪೂರ್ವಜರ ಕಾಲದಿಂದಲೂ ಹಿಂದೂ ಧರ್ಮವನ್ನು ಪಾಲನೆ ಮಾಡಲಾಗುತ್ತಿದೆ. ತಮ್ಮ ಧಾರ್ಮಿಕ ಭಾವನೆಗೆ ಅನಿಲ್ ಕುಮಾರ್ ಮತ್ತು ಪ್ರಶಾಂತಿ ಅವರು ಧಕ್ಕೆ ತಂದಿದ್ದಾರೆ. ಅಲ್ಲದೆ ಮತಾಂತರಕ್ಕೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ಜ್ಯೋತಿ ಅವರು ದೂರು ನೀಡಿದ್ದಾರೆ.
ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200