ಶಿವಮೊಗ್ಗ: ನೀರು ಕಾಯಿಸಲು ಮನೆಯ ಹಿಂಬದಿ ಇಟ್ಟಿದ್ದ ತಾಮ್ರದ ಹಂಡೆಯನ್ನೇ ಕಳ್ಳರು ಹೊತ್ತೊಯ್ದಿದ್ದಾರೆ. ಹಾಯ್‌ಹೊಳೆ ಸಮೀಪದ ಭಾರತಿ ನಗರದ ನಿವಾಸಿ ಮೀನಾಕ್ಷಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅಂದಾಜು 15 ಕೆಜಿ ತೂಕದ ತಾಮ್ರದ ಹಂಡೆಯನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ತಾಮ್ರದ ಹಂಡೆಯ ಅಂದಾಜು ಮೌಲ್ಯ ₹15,000 ಎಂದು ದೂರಿನಲ್ಲಿ ತಿಳಿಸಲಾಗಿದೆ. ಮನೆಯ ಹಿಂಭಾಗದ ತೆರೆದ ಜಾಗದಲ್ಲಿ ಮೀನಾಕ್ಷಿ ಅವರು ನೀರು ಕಾಯಿಸಲು ಹಂಡೆ ಇಟ್ಟಿದ್ದರು. ಕಳ್ಳತನವಾಗಿರುವ ಬಗ್ಗೆ ಗಮನಕ್ಕೆ ಬಂದ ನಂತರ ಕೂಡಲೆ ತುಂಗಾ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಮಹಿಳೆಯರೆ ಹುಷಾರ್, ದಾಖಲಾಯ್ತು ಮತ್ತೊಂದು ಕೇಸ್
2024ರಲ್ಲಿ ಮೀನಾಕ್ಷಿ ಅವರ ಹಳೆ ಮನೆಯ ಬೀಗ ಒಡೆದು ₹2,25,000 ಮೌಲ್ಯದ ಬಂಗಾರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿತ್ತು. ಆ ಸಂದರ್ಭದಲ್ಲು ದೂರು ನೀಡದ್ದನ್ನು ಉಲ್ಲೇಖಿಸಿದ್ದಾರೆ. ತುಂಗಾ ನಗರ ಠಾಣೆ ಪೊಲೀಸರು ಕಳ್ಳರಿಗಾಗಿ ಶೋಧ ನಡೆಸುತ್ತಿದ್ದಾರೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






