ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 27 ಏಪ್ರಿಲ್ 2020
ಕರೋನ ಫಂಡ್ ಹೆಸರಿನಲ್ಲಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಜನರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವಮೊಗ್ಗ ಎಪಿಎಂಸಿಯಲ್ಲಿ ಈತ ಹಣ ವಸೂಲಿ ಮಾಡುತ್ತಿದ್ದ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈತನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಕೈಯಲ್ಲಿ ಫೈಲ್ ಹಿಡಿದು ಇವತ್ತು ಬೆಳಗ್ಗೆ ಎಪಿಎಂಸಿಗೆ ಆಗಮಿಸಿದ್ದ. ಕೆಲವರ ಬಳಿ ತಾನು ಪೊಲೀಸ್ ಎಂದು ಪರಿಚಯಿಸಿಕೊಂಡಿದ್ದ. ಇನ್ನೂ ಕೆಲವರ ಬಳಿ ತಾನೂ ಪತ್ರಕರ್ತ ಎಂದು ಪರಿಚಯ ಮಾಡಿಕೊಂಡಿದ್ದ. ಎಲ್ಲರಿಂದಲೂ ಕರೋನ ಫಂಡ್ ಎಂದು ಹಣ ವಸೂಲಿ ಮಾಡುತ್ತಿದ್ದನಂತೆ.
ಅನುಮಾನಗೊಂಡ ಸಾರ್ವಜನಿಕರು ಸಂತೋಷ್‌ನನ್ನು ಹಿಡಿದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಸಂತೋಷ್ ಸರಿಯಾದ ಉತ್ತರ ನೀಡಲಿಲ್ಲ. ಹಾಗಾಗಿ ಆತನನ್ನು ಹಿಡಿದು ವಿನೋಬನಗರ ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]