ಶಿವಮೊಗ್ಗ: ಮಂಜುನಾಥ ಬಡಾವಣೆಯಲ್ಲಿ ಹಣಕ್ಕಾಗಿ ಕಾರ್ಮಿಕನೊಬ್ಬನ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದ ಮೂವರು ಆರೋಪಿಗಳಿಗೆ (three men) ನ್ಯಾಯಾಲಯವು ಐದು ವರ್ಷಗಳ ಕಠಿಣ ಕಾರಾವಾಸ ವಿಧಿಸಿ ತೀರ್ಪು ನೀಡಿದೆ. 2022ರಲ್ಲಿ ನಡೆದಿದ್ದ ಈ ಘಟನೆಗೆ ಸಂಬಂಧಿಸಿದಂತೆ ಈಗ ಅಂತಿಮ ತೀರ್ಪು ಹೊರಬಿದ್ದಿದೆ.
2022ರ ಮಾರ್ಚ್ 20ರಂದು ಬಾಬು ಕಿರಣ್ ಎಂಬುವವರು ಕೆಲಸ ಮುಗಿಸಿ ಕೂಲಿ ಹಣದೊಂದಿಗೆ ಮನೆಗೆ ಮರಳುತ್ತಿದ್ದರು. ಈ ವೇಳೆ ಮಂಜುನಾಥ ಬಡಾವಣೆಯ ಖಾಲಿ ಜಾಗದಲ್ಲಿ ಅವರನ್ನು ಅಡ್ಡಗಟ್ಟಿದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಮಾಡುವ ಉದ್ದೇಶದಿಂದ ಬೆನ್ನಿಗೆ ಚುಚ್ಚಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪಿ.ಎಸ್.ಐ ತಿಮ್ಮಪ್ಪ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಅಭಯ್ ಧನಪಾಲ್ ಚೌಗಲ ಅವರು ಈ ಪ್ರಕರಣದ ವಿಚಾರಣೆ ನಡೆಸಿದರು. ಆರೋಪಿಗಳಾದ ಸಂತೋಷ್, ಶರತ್ ಮತ್ತು ಪ್ರಶಾಂತ್ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆ, ಅವರಿಗೆ ತಲಾ 5 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹12,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ ಒಂದು ವರ್ಷ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ – ಎಟಿಎಂನಲ್ಲಿ ದುಡ್ಡು ಬರಲಿಲ್ಲ ಅಂತಾ ಬ್ಯಾಂಕ್‌ಗೆ ತೆರಳಿದ ಭದ್ರಾವತಿಯ ವ್ಯಕ್ತಿಗೆ ಕಾದಿತ್ತು ಶಾಕ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






