SHIVAMOGGA LIVE NEWS | BLAST | 27 ಮೇ 2022
ಹೊಟೇಲ್ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು (BLAST) ಹಾನಿ ಸಂಭವಿಸಿದೆ. ರಾತ್ರಿ ಘಟನೆ ಸಂಭವಿಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರ ತಾಲೂಕಿನ ನಗರ ಹೋಬಳಿಯ ಚಿಕ್ಕಪೇಟೆಯ ಹೊಟೇಲ್ ಒಂದರಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದೆ. ಹೊಟೇಲ್’ಗೆ ಹಾನಿಯಾಗಿದೆ. ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ.
ಗೃಹ ಸಚಿವರ ಭೇಟಿ
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಹೊಟೇಲ್ ಮಾಲೀಕರು ನಷ್ಟದ ಕುರಿತು ತಿಳಿಸಿದಾಗ, ಸರ್ಕಾರದಿಂದ ಪರಿಹಾರ ಒದಗಿಸುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭರವಸೆ ನೀಡಿದರು.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಹೊಸನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಅರೆ ಬೆತ್ತಲಾಗಿ ತಾಲೂಕು ಪಂಚಾಯಿತಿ ಕಚೇರಿ ಕಸ ಗುಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.