ಶಿವಮೊಗ್ಗ: ‘ಆಕಸ್ಮಿಕ ಬೆಂಕಿʼಗೆ ಲಾಡ್ಜ್ ಕೊಠಡಿಯಲ್ಲಿದ್ದ ಮಹಿಳೆಯೊಬ್ಬರು ಭಾಗಶಃ ಸುಟ್ಟು ಹೋಗಿದ್ದಾರೆ. ಶಿವಮೊಗ್ಗದಲ್ಲಿ ಆಕೆಗೆ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 39 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ದಾವಣಗೆರೆ ಮೂಲದ ಗೀತಾ ಎಂಬಾಕೆ ಬೆಂಕಿಗೆ ಸುಟ್ಟು ಹೋಗಿದ್ದಾರೆ. ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ದೇಹದ ಬಹುಭಾಗ ಸುಟ್ಟಿದ್ದರಿಂದ ಕೂಡಲೆ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲಾಡ್ಜ್ ರೂಂನಲ್ಲಿ ‘ಅಕಸ್ಮಿಕ ಬೆಂಕಿ’
ನಗರದ ಬಿ.ಹೆಚ್.ರಸ್ತೆಯಲ್ಲಿರುವ ಹೊಟೇಲ್‌ನಲ್ಲಿ ಕಳೆದ ರಾತ್ರಿ 1 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ. ರಾತ್ರಿ 12.45ರ ಹೊತ್ತಿಗೆ ಘಟನೆ ಸಂಭವಿಸಿದೆ. ‘ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಗಾಯಗೊಂಡಿದ್ದಾರೆʼ ಎಂದು ಮೆಗ್ಗಾನ್ ಆಸ್ಪತ್ರೆಯ ಎಂಎಲ್‌ಸಿ ವರದಿಯಲ್ಲಿ ನಮೂದಿಸಲಾಗಿದೆ.
ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿಯಬೇಕಿದೆ.
ಇದನ್ನೂ ಓದಿ » ಶಿವಮೊಗ್ಗದ ವಿದ್ಯಾನಗರದಲ್ಲಿ ಯುವಕನ ಮೇಲೆ ಹರಿದ ಲಾರಿ
