ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ಜಿಂಕೆ ಬೇಟೆಯಾಡಿ ಅಡುಗೆ ಮಾಡಿ ಊಟ ಮಾಡುತ್ತಿರುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ತ್ಯಾವರೆಕೊಪ್ಪದಲ್ಲಿ ನಡೆದಿದೆ.
ತ್ಯಾವರೆಕೊಪ್ಪದ ಉಮೇಶ್(೫೨) ಹಾಗೂ ವಿರೂಪಿನಕೊಪ್ಪದ ಈಶ್ವರ್(೩೦) ಬಂಧಿತ ಆರೋಪಿಗಳು. ವಿರೂಪಿನಕೊಪ್ಪದ ಏಳುಮಲೈ ಹಾಗೂ ಗೋವಿಂದ ಸ್ವಾಮಿ ಎಂಬ ಇಬ್ಬರು ಪರಾರಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಶಂಕರ ವಲಯ ಅರಣ್ಯಾಧಿಕಾರಿಳ ತಂಡ ವಿರೂಪಿನಕೊಪ್ಪದ ಮನೆ ಮೇಲೆ ದಾಳಿ ನಡೆಸಿದಾಗ ಜಿಂಕೆಯ ಹಸಿ ಮಾಂಸ ಹಾಗೂ ಬೇಯಿಸಿದ ಮಾಂಸ ಪತ್ತೆಯಾಗಿದ್ದು, ಜಿಂಕೆ ಚರ್ಮವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಾಳಿಯಲ್ಲಿ ವಲಯ ಅರಣ್ಯಾಧಿಕಾರಿ ಜಯೇಶ್, ಉಪ ವಲಯ ಅರಣ್ಯಾಧಿಕಾರಿ ಅಬ್ದುಲ್ ಮಜೀಬ್ ಸೇರಿದಂತೆ ಇತರೆ ಅರಣ್ಯಾಧಿಕಾರಿಗಳು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





