ಶಿವಮೊಗ್ಗ ಲೈವ್
ನರಸಿಹರಾಜಪುರ: ಭದ್ರಾ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಶಿವಮೊಗ್ಗದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ನಿಖಿಲ್ ಆರ್. ಸಿಂಗ್ (23) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಎನ್.ಆರ್.ಪುರ ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರಾಪುರ ಗ್ರಾಮದ ಮಾರಿ ದಿಬ್ಬದ ಬಳಿ ಘಟನೆ ನಡೆದಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನಿಖಿಲ್, ಸೋಮವಾರ ಮಧ್ಯಾಹ್ನ ಮೂವರು ಸ್ನೇಹಿತರೊಂದಿಗೆ ಭೈರಾಪುರ ಗ್ರಾಮಕ್ಕೆ ಬಂದಿದ್ದರು. ಮಾರಿ ದಿಬ್ಬದ ಬಳಿ ಹುಟ್ಟುಹಬ್ಬ ಆಚರಿಸಿ ನಂತರ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವೇಳೆ ಆಳ ಗೊತ್ತಾಗದೆ ಮುಳುಗಿದ್ದಾರೆ ಎಂದು ಆರೋಪಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸೋಮವಾರ ರಾತ್ರಿರವರೆಗೆ ಶೋಧ ನಡೆಸಿದರೂ ನಿಖಿಲ್ ಪತ್ತೆಯಾಗಿರಲಿಲ್ಲ. ಮಂಗಳವಾರ ಬೆಳಿಗ್ಗೆ ಪುನಃ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.