ಶಿವಮೊಗ್ಗ : ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿ.ಎ.ಆರ್) ಡಿವೈಎಸ್‌ಪಿ ಕೃಷ್ಣಮೂರ್ತಿ ಮತ್ತು ಎ.ಆರ್.ಎಸ್.ಐ ರವಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅಲ್ಲದೆ ಘಟನೆ ಕುರಿತು ಲೋಕಾಯುಕ್ತ ಪ್ರಕಟಣೆಯಲ್ಲಿ ವಿವರ ನೀಡಲಾಗಿದೆ.
ಲೋಕಾಯುಕ್ತ ಪ್ರಕಟಣೆಯಲ್ಲಿ ಏನಿದೆ?
![]() |
ಡಿ.ಎ.ಆರ್. ಪೊಲೀಸ್‌ನ ಎಹೆಚ್‌ಸಿ ಪ್ರಸನ್ನ ಕುಮಾರ್ ಅವರನ್ನು ಭದ್ರಾವತಿಯ ತಾಲೂಕು ಕಚೇರಿಯ ಖಜಾನೆಯ ಗಾರ್ಡ್ ಕರ್ತವ್ಯದಲ್ಲೇ ಮುಂದುವರೆಸಲು ಡಿವೈಎಸ್‌ಪಿ ಕೃಷ್ಣಮೂರ್ತಿ 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಎಆರ್‌ಎಸ್‌ಐ ರವಿಗೆ ಅವರಿಗೆ ತಲುಪಿಸುವಂತೆ ಸೂಚಿಸಿದ್ದರು. ಈ ಕುರಿತು ಫೋನ್‌ನಲ್ಲಿ ನಡೆಸಿದ ಸಂಭಾಷಣೆಯನ್ನು ಪ್ರಸನ್ನ ಕುಮಾರ್ ರೆಕಾರ್ಡ್ ಮಾಡಿಕೊಂಡಿದ್ದರು ಎಂದು ಲೋಕಾಯುಕ್ತ (Lokayukta) ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾರಿ ಮಳೆ, ತೆಂಗು, ಅಡಿಕೆ ಮರಗಳು ಧರೆಗೆ, ಎಲ್ಲೆಲ್ಲಿ ಹೇಗಿದೆ ವರ್ಷಧಾರೆ?
ಲೋಕಾಯುಕ್ತಕ್ಕೆ ದೂರು ನೀಡಿದ್ದ ಪೊಲೀಸ್
ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪ್ರಸನ್ನ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು ಮಧ್ಯಾಹ್ನ ಡಿ.ಎ.ಆರ್ ಪೊಲೀಸ್ ವಸತಿ ಗೃಹದಲ್ಲಿರುವ ಡಿವೈಎಸ್‌ಪಿ ಮನೆಯಲ್ಲಿ ಪ್ರಸನ್ನ ಕುಮಾರ್ ಹಣವನ್ನು ಡಿವೈಎಸ್‌ಪಿ ಕೃಷ್ಣಮೂರ್ತಿಗೆ ಅವರಿಗೆ ಕೊಟ್ಟಿದ್ದಾರೆ. ಆಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
5 ಸಾವಿರ ರೂ. ಹಣದ ಸಹಿತ ಡಿವೈಎಸ್‌ಪಿ ಕೃಷ್ಣಮೂರ್ತಿ, ಎಆರ್‌ಎಸ್‌ಐ ರವಿಯನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಠಾಣೆ ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ ತನಿಖೆ ನಡೆಸುತ್ತಿದ್ದಾರೆ.
ಲೋಕಾಯುಕ್ತ (Lokayukta) ಎಸ್.ಪಿ ಮಂಜುನಾಥ ಚೌದರಿ, ಡಿವೈಎಸ್‌ಪಿ ಚಂದ್ರಶೇಖರ್.ಬಿ.ಪಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ಸ್‌ಪೆಕ್ಟರ್ ವೀರಬಸಪ್ಪ ಎಲ್.ಕುಸಲಾಪುರ, ಸಿಬ್ಬಂದಿ ಯೋಗೇಶ್, ಮಂಜುನಾಥ್, ಟೀಕಪ್ಪ, ಸುರೇಂದ್ರ, ಪ್ರಶಾಂತ್ ಕುಮಾರ್, ಚನ್ನೇಶ, ದೇವರಾಜ್, ಅರುಣ್ ಕುಮಾರ್, ಪ್ರಕಾಶ್ ಬಾರಿಮರದ, ಅಂಜಲಿ, ಚಂದ್ರಿಬಾಯಿ, ಗೋಪಿ, ಜಯಂತ್, ತರುಣ್ ಕುಮಾರ್, ಗಂಗಾಧರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200