ಶಿವಮೊಗ್ಗ ಲೈವ್.ಕಾಂ |SHIMOGA NEWS | 4 ಸೆಪ್ಟೆಂಬರ್ 2021
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬಕ್ಕೆ ಸೇರಿದ ಶಿಕ್ಷಣ ಸಂಸ್ಥೆ ಬಸ್ಸುಗಳಿಂದ ಡಿಸೇಲ್ ಕಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಡಿಸೇಲ್ ಮತ್ತು ಸರಕು ಸಾಗಣೆ ವಾಹನವೊಂದನ್ನು ವಶಕ್ಕೆ ಪಡೆದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ | ರಾತ್ರೋರಾತ್ರಿ ಸೋಮಿನಕೊಪ್ಪದಲ್ಲಿ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ಸುಗಳಿಂದ ಡಿಸೇಲ್ ಕಳ್ಳತನ
ಟಿಪ್ಪುನಗರದ ಸಯ್ಯದ್ ಸಬ್ರೇದ್ ಮತ್ತು ಸಯ್ಯದ್ ಜಾಫರ್ ಬಂಧಿತರು. ಡಿಸೇಲ್ ಕಳ್ಳತನ ಮಾಡುತ್ತಿದ್ದ ಸಂಬಂಧ ಶಂಕೆ ಮೇಲೆ ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಏನಿದು ಕೇಸ್?
ಸೋಮಿನಕೊಪ್ಪದ ಮೈತ್ರಿ ಅಪಾರ್ಟ್’ಮೆಂಟ್ ಬಳಿ ನಿಲ್ಲಿಸಿದ್ದ ಪಿಇಎಸ್ ಕಾಲೇಜು ಬಸ್ಸುಗಳಿಂದ ಡಿಸೇಲ್ ಕಳ್ಳತನ ಮಾಡಲಾಗಿತ್ತು. ಎರಡು ದೊಡ್ಡ ಬಸ್ಸುಗಳು ಮತ್ತು ಎರಡು ಮಿನಿ ಬಸ್ಸುಗಳಿಂದ ನಡುರಾತ್ರಿಯಲ್ಲಿ 580 ಲೀಟರ್ ಡಿಸೇಲ್ ಕಳವು ಮಾಡಲಾಗಿತ್ತು.
ಕೃತ್ಯಕ್ಕೆ ಸ್ನೇಹಿತನ ಗಾಡಿ
ಸಯ್ಯದ್ ಸಬ್ರೇದ್ ಮತ್ತು ಸಯ್ಯದ್ ಜಾಫರ್, ಅಶೋಕ್ ಲೇಲ್ಯಾಂಡ್ ಲಗೇಜ್ ವಾಹನವನ್ನು ಕೃತ್ಯಕ್ಕೆ ಬಳಕೆ ಮಾಡಿಕೊಂಡಿದ್ದರು. ಇದು ಅವರ ಸ್ನೇಹಿತನದ್ದಾಗಿತ್ತು ಎಂದು ತನಿಖೆ ವೇಳೆ ಗೊತ್ತಾಗಿದೆ. ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಇವರಿಬ್ಬರು ಅನುಮಾನಾಸ್ಪದವಾಗಿ ವರ್ತಿಸಿದ್ದಾರೆ. ವಿಚಾರಣೆ ನಡೆಸಿದಾಗ ಬಸ್’ಗಳಲ್ಲಿ ಡಿಸೇಲ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಇವರಿಂದ 90 ಲೀಟರ್ ಡಿಸೇಲನ್ನು ವಶಕ್ಕೆ ಪಡೆಯಲಾಗಿದೆ.
ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರನ್ನು ಬಂಧಿಸಿ ವಿಚಾರಣೆ ಮುಂದುವರೆಸಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200