ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 06 JANUARY 2021
ಲಾರಿಗಳಲ್ಲಿ ಡಿಸೇಲ್ ಕಳವು ಮಾಡುತ್ತಿದ್ದ ಕಳ್ಳನನ್ನು ಸಿಸಿ ಟಿವಿ ಕ್ಯಾಮೆರಾಗಳ ಸಹಾಯದಿಂದ ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಲ್ಮಾನ್ ಬಂಧಿತ ಆರೋಪಿ. ಈತ ಮೂಲತಃ ಮಹಾರಾಷ್ಟ್ರದವನು ಎನ್ನಲಾಗಿದೆ. ಶಿವಮೊಗ್ಗ ನಗರದ ಊರುಗಡೂರು ವೃತ್ತದ ಬಳಿ ಶಂಕರ್ ಎಂಬುವರಿಗೆ ಸೇರಿದ ಲಾರಿಯಿಂದ ಡಿಸೇಲ್ ಕಳವು ಮಾಡುತ್ತಿದ್ದಾಗ ಸಲ್ಮಾನ್‌ನನ್ನು ಬಂಧಿಸಲಾಗಿದೆ.
ನಿಲ್ಲಿಸಿದ್ದ ಲಾರಿಯಲ್ಲಿ ಡಿಸೇಲ್ ಕಳ್ಳತನವಾಗಿರುವ ಬಗ್ಗೆ ಶಂಕರ್ ಎಂಬುವವರು ತುಂಗಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಲಾರಿಯಿಂದ ಡಿಸೇಲ್ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ತುಂಗಾ ನಗರ ಪೊಲೀಸರು ಡಿಸೇಲ್ ಕಳ್ಳನನ್ನು ಬಂಧಿಸಿದ್ದಾರೆ.
ಸಲ್ಮಾನ್‍ನಿಂದ 11,970 ರೂ. ಮೌಲ್ಯದ 150 ಲೀಟರ್ ಡಿಸೇಲ್ ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತುಂಗಾನಗರ ಠಾಣೆ ಪಿಎಸ್‌ಐ ತಿರುಮಲೇಶ್, ಹೆಚ್.ಸಿ ಸಯ್ಯದ್ ಇಮ್ರಾನ್, ಪಿಸಿ ರಾಜು ಕಾರ್ಯಾಚರಣೆಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422