ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಾಕು ನಾಯಿಯ (pet dog) ವಿಚಾರವಾಗಿ ಆರಂಭವಾದ ಸಣ್ಣ ಜಗಳ, ವ್ಯಕ್ತಿಯೊಬ್ಬರ ಹಲ್ಲು ಮುರಿಯುವಷ್ಟು ದೊಡ್ಡ ಮಟ್ಟದ ಹಲ್ಲೆಯಲ್ಲಿ ಅಂತ್ಯವಾಗಿದೆ. ನಗರದ ಮಂಡ್ಲಿಯಲ್ಲಿ ಘಟನೆ ನಡೆದಿದೆ.
ಖಾಸಗಿ ಸಂಸ್ಥೆಯ ಉದ್ಯೋಗಿಯೊಬ್ಬರು ಹಲ್ಲೆಗೊಳಗಾಗಿದ್ದಾರೆ. ಮಾರ್ಚ್ 13ರ ರಾತ್ರಿ ಖಾಸಗಿ ಸಂಸ್ಥೆಯ ಉದ್ಯೋಗಿ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಈ ವೇಳೆ ಅವರ ಸಾಕು ನಾಯಿ ಹತ್ತಿರ ಬಂದಿದ್ದು, ಅದರ ಹಿಂಗಾಲಿನಲ್ಲಿ ರಕ್ತ ಬರುತ್ತಿರುವುದನ್ನು ಗಮನಿಸಿದ್ದರು. ನಾಯಿ ಕಾಲಿಗೆ ಯಾರೋ ಏನೋ ಮಾಡಿದ್ದಾರೆ ಎಂದು ಅವರು ಮಾತನಾಡಿಕೊಳ್ಳುತ್ತಿದ್ದಾಗ, ಪಕ್ಕದ ಮನೆಯವರು ಜಗಳಕ್ಕೆ ಇಳಿದಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲು ಮುರಿದು ಜೀವ ಬೆದರಿಕೆ
ನಾಯಿ ವಿಚಾರವಾಗಿ ಮಾತನಾಡಿದ್ದನ್ನು ಪ್ರಶ್ನಿಸಿ ನೆರೆಮನೆಯವರು ಏಕಾಏಕಿ ಖಾಸಗಿ ಸಂಸ್ಥೆ ಉದ್ಯೋಗಿ ಮೇಲೆ ಎರಗಿದ್ದಾರೆ. ಕೈಯಲ್ಲಿದ್ದ ಕಡಗದಿಂದ ಎಡಗಣ್ಣಿಗೆ ಗುದ್ದಿ, ಮುಷ್ಟಿಯಿಂದ ಬಾಯಿಗೆ ಬಲವಾಗಿ ಹೊಡೆದಿದ್ದಾರೆ. ಘಟನೆಯಲ್ಲಿ ಖಾಸಗಿ ಸಂಸ್ಥೆ ಉದ್ಯೋಗಿಯ ಹಲ್ಲು ಮುರಿದಿದ್ದು, ಮುಖಕ್ಕೆ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದೇ ವೇಳೆ ಖಾಸಗಿ ಸಂಸ್ಥೆ ಉದ್ಯೋಗಿಯ ಕುಟುಂಬದವರ ಮೇಲೂ ಹಲ್ಲೆಯಾಗಿದೆ ಎಂದು ಆಪಾದಿಸಲಾಗಿದೆ. ಗಾಯಾಳು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

LATEST NEWS
- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

- ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್

About The Editor
ನಿತಿನ್ ಆರ್.ಕೈದೊಟ್ಲು














